
ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನ ಗರ್ಭಾಲಯ ಕಳಸ ಪ್ರತಿಷ್ಠಾಪನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 5- ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ನಗರದ ಕೋಟೆ ಪ್ರದೇಶದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದಲ್ಲಿ ನ.೬ ರಿಂದ ನ.೮ ರವರೆಗೆ ಗರ್ಭಾಲಯ ಕಳಸ ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ಹೋಮ, ಪೂಜೆ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತ ಹೆಚ್.ಗಂಗಾಧರಪ್ಪ ಅವರು ಕೋರಿದ್ದಾರೆ.