
ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿಗೆ ಜಿಲ್ಲಾಧ್ಯಕ್ಷರ ನೇಮಕ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 7- ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ರಾಜ್ಯ ಘಟಕದಿಂದ ಕೊಪ್ಪಳ ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ಜಿ.ಎಸ್. ಗೋನಾಳ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರಾದ ಎನ್. ತಿಮ್ಮಪ್ಪ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ವಚನ ಸಾಹಿತ್ಯ ಹಾಗೂ ಶರಣ ಸಾಹಿತ್ಯವನ್ನು ಜಿಲ್ಲೆಯಾದ್ಯಂತ ಪ್ರಚಾರ ಮಾಡಬೇಕು. ಅಲ್ಲದೆ ಕೊಪ್ಪಳ ಜಿಲ್ಲೆ ಮತ್ತು ವಿವಿಧ ತಾಲೂಕ ಕೇಂದ್ರಗಳಲ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡು ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತನ್ನು ಬಲಿಷ್ಠವಾಗಿ ಕಟ್ಟುವ ಮೂಲಕ ಕಾರ್ಯೋನ್ಮುಖರಾಗಬೇಕೆಂದು ರಾಜ್ಯಾಧ್ಯಕ್ಷರಾದ ಎನ್. ತಿಮ್ಮಪ್ಪ ತಿಳಿಸಿದ್ದಾರೆ.