KB

11 ರಂದು ವೀರವನಿತೆ ಒನಕೆ ಓಬವ್ವ ಜಯಂತಿ

ಕರುನಾಡ ಬೆಳಗು ಸುದ್ದಿ

ವಿಜಯನಗರ, 8 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮವನ್ನು ನವಂಬರ್ ೧೧ ರಂದು ಬೆಳಿಗ್ಗೆ ೧೦ ಗಂಟೆಗೆ ಹೊಸಪೇಟೆಯ ಛಲುವಾದಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಂ ಹಾಗೂ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕಾರಾದ ಕೆ.ನೇಮಿರಾಜ ನಾಯ್ಕ, ಡಾ; ಎನ್.ಟಿ.ಶ್ರೀನಿವಾಸ್, ಎಲ್.ಕೃಷ್ಣನಾಯಕ, ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ ಹಾಗೂ ವೈ.ಎಂ. ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ ಎನ್., ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ ಅವರು ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್ ಉಪಸ್ಥಿತರಿರುವರು. ಮರಿಯಮ್ಮನಹಳ್ಳಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಬಸವರಾಜ ಅಮ್ಮನಕೇರಿ ಅವರು ಉಪನ್ಯಾಸ ನೀಡುವರು.

Leave a Reply

Your email address will not be published. Required fields are marked *

error: Content is protected !!