
ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಡಿಡಿಪಿಐ ಉಮಾದೇವಿ ಭೇಟಿ ಪರಿಶೀಲನೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 13- ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮವಾದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಶಿಕ್ಷಣ ಇಲಾಖೆಯಲ್ಲಿ ಜಾರಿ ಮಾಡಿದೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಶಿಕ್ಷಕರು ಶ್ರಮವಹಿಸಬೇಕು ಸರ್ಕಾರ ಜಾರಿಗೆ ತಂದ ಯೋಜನೆಗಳ ಫಲವನ್ನು ವಿದ್ಯಾರ್ಥಿಗಳು ಪಡೆಯಲು ಸಾಧ್ಯವಾಗುತ್ತದೆ ಎಂದು ಬಳ್ಳಾರಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಡಿಡಿಪಿಐ ಉಮಾದೇವಿ ಅವರು ಹೇಳಿದರು.
ಸಿರುಗುಪ್ಪ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿದ ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಂದ ವಿವಿಧ ಪಠ್ಯಗಳ ಮಾಹಿತಿ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ನಂತರ ಅವರು ಯಾವುದೇ ವಿದ್ಯಾರ್ಥಿಯು ಪರೀಕ್ಷೆಗಳಲ್ಲಿ ಅನುಉತ್ತೀರ್ಣ ಆಗಬಾರದು ಇದಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೈ ಜೋಡಿಸಿದರೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಸಾಧ್ಯ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲಿಸಬೇಕು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯ ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗುರಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ಮುಖ್ಯ ಗುರುಗಳಾದ ಜಿ.ವೆಂಕಟೇಶ್, ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ಶಿಕ್ಷಕಿ ಎಂ.ಟಿ.ಶಾ0ತ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.