3 (2)

ಸಂಡೂರು ವಿಧಾನಸಭೆ ಉಪಚುನಾವಣೆ-2024
ಶಾಂತಿಯುತ ಮತದಾನ, ಮತ ಹಕ್ಕು ಚಲಾಯಿಸಿದ ಮತದಾರರು

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 13- ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.೧೩ ರ ಬುಧವಾರದಂದು ಬೆಳಿಗ್ಗೆ ೦೭ ಗಂಟೆಯಿ0ದ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಮತದಾನ ಬಹುತೇಕ ಶಾಂತಿಯುತವಾಗಿ ಜರುಗಿತು.

ಸಂಡೂರು ತಾಲ್ಲೂಕಿನ ಸಂಡೂರು ಪಟ್ಟಣ, ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಮತ ಹಕ್ಕು ಚಲಾಯಿಸಿದ್ದು ಕಂಡುಬ0ದಿತು.

ಕುಡತಿನಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಕಡೆ ಇರುವ ೧೮೬, ೧೮೭, ೧೮೮ ಮತ್ತು ೧೮೯ ಮತಗಟ್ಟೆ ಕೇಂದ್ರಗಳಲ್ಲಿ ಮಹಿಳೆಯರು ಸಾಲಾಗಿ ಬಂದು ತಮ್ಮ ಮತ ಚಲಾವಣೆ ಮಾಡಿದರು.

ಸುಶೀಲಾನಗರ ಗ್ರಾಮದಲ್ಲಿಯೂ ಮಹಿಳೆಯರು ಸಾಲು ನಿಂತು ಮತ ಚಲಾಯಿಸುವುದು ಕಂಡುಬ0ದಿತು.

ಗಮನ ಸೆಳೆದ ಸಖಿ ಮತಗಟ್ಟೆ : ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಆಕರ್ಷಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತೋರಣಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಖಿ ಮತಗಟ್ಟೆ ಸ್ಥಾಪಿಸಲಾಗಿತ್ತು.

ಮತದಾರರು ಸಖಿ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿದರು. ಬಳಿಕ ಅಲ್ಲಿಯೇ ಸ್ಥಾಪಿಸಲಾಗಿದ್ದ ಪಿಂಕ್ ಸೆಲ್ಫಿ ಬೂತ್‌ನಲ್ಲಿ ನಿಂತುಕೊ0ಡು ಮತಶಾಹಿ ಬೆರಳು ತೋರಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಸಂಭ್ರಮಿಸಿದ್ದು ಕಂಡುಬ0ತು.

ಮೊದಲ ಬಾರಿ ಮತ ಚಲಾಯಿಸಿದ ಯುವತಿ : ಜಿಲ್ಲಾಡಳಿತವು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಮತದಾರರ ಪಟ್ಟಿಯಲ್ಲಿ ಪ್ರಥಮ ಬಾರಿಗೆ ನೊಂದಾಯಿಸಿಕೊ0ಡಿದ್ದ ಸಂಡೂರು ಪಟ್ಟಣದ ಯುವತಿ ಅವನಿತ್ ಅವರು ಸಂಡೂರು ತಾಪಂ ಕಚೇರಿಯ ಮತಗಟ್ಟೆ ಸಂಖ್ಯೆ ೬೭ ರಲ್ಲಿ ಮೊದಲ ಬಾರಿಗೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಿದ್ದು, ಇದೇ ಮೊದಲ ಬಾರಿ ಮತ ಚಲಾಯಿಸಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.

ಹಿರಿಯ ವಯಸ್ಕರಿಂದ ಮತದಾನ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ವಿವಿಧೆಡೆ ಹಿರಿಯ ವಯಸ್ಕರು ತಮ್ಮ ಮತದಾನ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವದ ಕರ್ತವ್ಯ ಮೆರೆದರು.

Leave a Reply

Your email address will not be published. Required fields are marked *

error: Content is protected !!