ಪ್ರತಿಯೊಬ್ಬರು ಗ್ರಂಥಾಲಯದ ಪುಸ್ಥಕಗಳನ್ನು ಬಳಸಬೇಕು : ಮೇಯರ್ ನಂದೀಶ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 21- ಗ್ರಂಥಾಲಯದ ಪುಸ್ತಕಗಳು ಮತ್ತು ಅವುಗಳ ಮಾಹಿತಿಯು ಬಹಳ ಉಪಯುಕ್ತವಾಗಿದ್ದು, ಮಕ್ಕಳು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರು ಆದ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ರಾಷ್ಟಿಯ ಗ್ರಂಥಾಲಯ ಸಪ್ತಾಹ-೨೦೨೪ರ ಅಂಗವಾಗಿ ನಗರ ಕೇಂದ್ರ ಗ್ರಂಥಾಲಯ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟಿಯ ಗ್ರಂಥಾಲಯ ಸಪ್ತಾಹ-೨೦೨೪ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಡಾ.ಎಸ್.ಆರ್. ರಂಗನಾಥನ್ ಹಾಗೂ ಸರಸ್ವತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರ ಕೇಂದ್ರ ಗ್ರಂಥಾಲಯಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಮಹಾನಗರ ಪಾಲಿಕೆಯಿಂದ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯರು ಹಾಗೂ ಮಹಾನಗರ ಪಾಲಿಕೆಯ ಸದಸ್ಯರಾದ ಬಿ.ಜಾನಕಿ ಅವರು ಮಾತನಾಡಿ, ಪ್ರತಿಯೊಬ್ಬರು ಓದುವ ಹವ್ಯಾಸ ಬೆಳೆಸಿಕೊಂಡು ಗ್ರಂಥಾಲಯದ ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಬಿ.ಕೆ.ಲಕ್ಷಿö್ಮÃಕಿರಣ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ಕೇಂದ್ರ ಗ್ರಂಥಾಲಯದ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನರಸಣ್ಣ ಅವರು ಮಾತನಾಡಿ, ಗ್ರಂಥಾಲಯದ ಸದುಪಯೋಗ ಪಡೆಯಲು ಎಲ್ಲಾರು ಗ್ರಂಥಾಲಯದ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯರು ಹಾಗೂ ನಿವೃತ್ತ ಉಪನ್ಯಾಸಕ ಎನ್.ಬಸವರಾಜ ಅವರು “ಆಧುನಿಕ ಯುಗದಲ್ಲಿ ಓದುವ ಸಂಸ್ಕೃತಿ” ಕುರಿತು ವಿಶೇಷ ಉಪನ್ಯಾಸ ನೀಡಿ, ಗ್ರಂಥಾಲಯದ ಕುರಿತಾಗಿ ಉತ್ತಮ ಮಾಹಿತಿ ನೀಡಿ, ಓದಿನ ಪ್ರಾಮುಖ್ಯತೆ ಹಾಗೂ ಓದುವ ಸಂಸ್ಕೃತಿ ಬಗ್ಗೆ ತಿಳಿಸಿ, ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.