13

ತಂಬಾಕು. ಭರವಸೆ, ಆರೋಗ್ಯ, ಕಸಿಯುವ ಶತ್ರು : ಪಿ.ವಿವೇಕಾನಂದ

ಕರುನಾಡ ಬೆಳಗು ಸುದ್ದಿ

ವಿಜಯನಗರ, 21- ವಿದ್ಯಾರ್ಥಿ ಜೀವನದಲ್ಲಿ ತಂಬಾಕು ಅತ್ಯಂತ ಮಾರಕ ವಸ್ತು, ಇದು ವಿದ್ಯಾರ್ಥಿಗಳ ಭರವಸೆ ಮತ್ತು ಆರೋಗ್ಯ ಕಸಿಯುವ ಶತ್ರುವಿದ್ದಂತೆ ಎಂದು ಹೊಸಪೇಟೆಯ ಸಹಾಯಕ ಆಯುಕ್ತರಾದ ಪಿ.ವಿವೇಕಾನಂದ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊಸಪೇಟೆಯ ಮಹಿಳಾ ಸಮಾಜ, ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ನವಂಬರ್ ೨೧ ರಂದು ನಡೆದ ತಂಬಾಕು ಮುಕ್ತ ಅಭಿಯಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ತಂಬಾಕು ಸೇವನೆಯು ಯುವ ಜನರ ಮೇಲೆ ಬಹುಮುಖಿ ಪ್ರಭಾವವನ್ನು ಬೀರುತ್ತದೆ. ಇದರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಮತ್ತು ಸಮಾಜ ಹಾಗೂ ಪರಿಸರದ ಮೇಲೆ ಋನಾತ್ಮಕ ಪ್ರಭಾವ ಬೀರುತ್ತದೆ. ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಕಡಿಮೆಯಾಗುತ್ತದೆ. ಯುವಕರು ತಂಬಾಕು ಸೇವನೆಯಿಂದ ದೂರವಿದ್ದರೆ, ಅವರು ತಮ್ಮ ಶಿಕ್ಷಣ ಮತ್ತು ವೃತ್ತಿ ಜೀವನದ ಮೇಲೆ ಹೆಚ್ಚಿನ ಗಮನ ಹರಿಸಬಹುದು.

ತಂಬಾಕು ನಶೆಗಳಿಂದ ಉಂಟಾಗುವ ಆಲಸ್ಯ ಮತ್ತು ಒತ್ತಡವನ್ನು ತಪ್ಪಿಸುವ ಮೂಲಕ ಅವರ ಕಾರ್ಯಕ್ಷಮತೆ ಹೆಚ್ಚಿಸಬಹುದು ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಆರೋಗ್ಯ ಇಲಾಖೆಯಿಂದ ೬೦ ದಿನಗಳ ಕಾಲ ತಂಬಾಕು ಮುಕ್ತ ಯುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯ ೧೬೦ ಶಾಲಾ ಕಾಲೇಜುಗಳಲ್ಲಿ ಈ ಅಭಿಯಾನ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ತಂಬಾಕು ಮುಕ್ತ ಗ್ರಾಮ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ತAಬಾಕು ೫ ಸಾವಿರ ಹಾನಿಕಾರಕ ರಾಸಾಯನಿಕ ಅಂಶಗಳನ್ನು ಒಳಗೊಂಡಿರುತ್ತದೆ. ಕರ್ನಾಟಕದಲ್ಲಿ ಶೇ.೨೨.೮ ಜನ ತಂಬಾಕು ಸೇವನೆ ಮಾಡುತ್ತಾರೆ. ಕ್ಯಾನ್ಸರ್ ರೋಗಿಗಳಲ್ಲಿ ಶೇ.೨೫ ರಷ್ಟು ತಂಬಾಕಿನಿAದ ಕ್ಯಾನ್ಸರ್ ಗೆ ಒಳಗಾಗುತ್ತಾರೆ. ಆದ್ದರಿಂದ ಮಕ್ಕಳು ತಂಬಾಕಿನಿ0ದ ದೂರವಿರಬೇಕು ಎಂದು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ ಹವಾಲ್ದಾರ್, ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮುಖೋಪಾಧ್ಯಯರಾದ ಆರ್.ರಮಾ. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ರಾಧಿಕಾ.ಕೆ, ತಾಲೂಕು ಆರೋಗ್ಯ ಅಧಿಕಾರಿ ಡಾ. ಬಸವರಾಜ.ಸಿ, ಮತ್ತು ಆರೋಗ್ಯ ಇಲಾಖೆಯ ಇನ್ನಿತರ ಅಧಿಕಾರಿಗಳು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!