
ಭಾಗ್ಯನಗರ ಪ.ಪಂ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 22- ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ ೨೦೨೪-೨೫ನೇ ಸಾಲಿನ ಎಸ್ಎಫ್ಸಿ ಅನುದಾನದಲ್ಲಿ ಶೇ.೫ ಯೋಜನೆ, ಶೇ.೨೪.೧೦ರ ಯೋಜನೆಯಲ್ಲಿ ಶೇ.೪೦ ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಎಸ್ಎಫ್ಸಿ ಮುಕ್ತನಿಧಿ ಅನುದಾನದಲ್ಲಿ ಶೇ.೭.೨೫ರ ಯೋಜನೆಯಲ್ಲಿ ಶೇ.೪೦ ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರಿಗೆ ವಿಮಾ ಯೋಜನೆ : ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನ ಎಸ್ಎಫ್ಸಿ ಅನುದಾನದಲ್ಲಿ ಶೇ.೫ ಯೋಜನೆಯ ಪಟ್ಟಣ ಪಂಚಾಯತ ಅನುದಾನ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಿಮಾ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಫಲಾನುಭವಿಗಳು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಶೇ.೭೫ ರಷ್ಟು ಅಂಗವಿಕಲತೆ ಹೊಂದಿರುವ ಬಗ್ಗೆ ವಿಕಲಚೇತನರ ಗುರುತಿನ ಚೀಟಿಯ ಜರಾಕ್ಸ್ ಪ್ರತಿಗಳು ಹಾಗೂ ೨ ಭಾವಚಿತ್ರಗಳನ್ನು ನವೆಂಬರ್ ೩೦ರೊಳಗೆ ಪ.ಪಂ. ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಯೋಜನೆಗಳು : ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನ ಎಸ್ಎಫ್ಸಿ ಅನುದಾನದಲ್ಲಿ ಶೇ.೨೪.೧೦ ರ ಯೋಜನೆಯಲ್ಲಿ ಶೇ.೪೦ ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದು. ಪರಿಶಿಷ್ಟ ಪಂಗಡದ ಎಂ.ಬಿ.ಬಿ.ಎಸ್ ಮತ್ತು ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಸಿ ಒದಗಿಸುವುದು, ಅರ್ಹ ಅರ್ಜಿ ಸಲ್ಲಿಸುವ ಫಲಾನುಭವಿಗಳು ಅರ್ಜಿಯೊಂದಿಗೆ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಅಂಕಪಟ್ಟಿಗಳು, ಜಾತಿ, ಆದಾಯ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಗಳು ಮತ್ತು ೨ ಭಾವಚಿತ್ರಗಳನ್ನು ನವೆಂಬರ್ ೩೦ ರೊಳಗಾಗಿ ಪ.ಪಂ. ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.