
ಶಿಕ್ಷಣ ದಾಸೋಹದ ಗವಿಮಠಕ್ಕೆ ಅನುದಾನ ಬಿಡುಗಡೆ ಮಾಡಿ
ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಒತ್ತಾಯ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 12- ಐತಿಹಾಸಿಕ ಪ್ರಸಿದ್ಧ ಗವಿಮಠದ ಬಡ ವಿಧ್ಯಾರ್ಥಿಗಳ ವಸತಿ ನಿಲಯಕ್ಕೆ ಹಿಂದಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿದ್ದ ₹10 ಕೋಟಿ ಅನುದಾನ ತ್ವರಿತವಾಗಿ ಬಿಡುಗಡೆ ಮಾಡಬೇಕು ಸರ್ಕಾರದ ವಿಳಂಬದಿಂದ ಬಡ ವಿಧ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸರ್ಕಾರದ ನಡೆಯನ್ನು ಖಂಡಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ಭಾಗದಲ್ಲಿ ಗವಿಸಿದ್ಧೇಶ್ವರ ದೊಡ್ಡಮಠವಾಗಿದ್ದು, ಮಠದಲ್ಲಿ ಶಿಕ್ಷಣವನ್ನು ಉಚಿತವಾಗಿ ಕೊಡಲಾಗುತ್ತಿದೆ ಅಲ್ಲಿಗೆ ಹಿಂದಿನ ಸರ್ಕಾರ ನೀಡಿದ ಹಣವನ್ನು ಸರ್ಕಾರ ಬಿಡುಗಡೆ ಮಾಡದೆ ಇರುವುದನ್ನು ಪ್ರಶ್ನಿಸಿದರು .
ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಶಿಕ್ಷಣಕ್ಕೆ ಒತ್ತು ಕೊಡುತ್ತಿದ್ದಾರೆ. ಸರ್ಕಾರ ಮಠಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.