a08d9915-2fb7-494d-b386-2c1490e0ca37

ಪೂರ್ವಭಾವಿ ಸಭೆ
ವಿಜೃಂಭಣೆಯ ಹಂಪಿ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಂ.ಎಸ್.ದಿವಾಕರ

ಕರುನಾಡ ಬೆಳಗು ಸುದ್ದಿ
ಹೊಸಪೇಟೆ(ವಿಜಯನಗರ) , ೦೧- :ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತ ವೈಭವ ಸಾರುವ ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲಾ ಸಮಿತಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಹಂಪಿ ಉತ್ಸವ ಆಚರಣೆ ಕರ‍್ಯಕಾರಿ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಹೇಳಿದರು.
ಹಂಪಿ ಉತ್ಸವ ಕುರಿತು ಸೋಮವಾರ ಜಿಲ್ಲಾಧಿಕಾರಿಗಳ ಕರ‍್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿಯ ಹಂಪಿ ಉತ್ಸವವನ್ನು ಫೆಬ್ರವರಿ ೨, ೩ ಮತ್ತು ೪ ರಂದು ಆಚರಿಸಲು ನಿಗದಿಪಡಿಸಲಾಗಿದೆ. ಕರ‍್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಈಗಾಗಲೇ ಸ್ವಾಗತ ಮತ್ತು ಶಿಷ್ಠಾಚಾರ ಸಮಿತಿ, ಸಾರಿಗೆ ಸಮಿತಿ, ವಸತಿ ಸಮಿತಿ, ಆಹಾರ ಸಮಿತಿ, ಮಾಧ್ಯಮ ಸಮಿತಿ, ಮೂಲಭೂತ ಸೌಲಭ್ಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸಮಿತಿ, ಆರೋಗ್ಯ ಮತ್ತು ನರ‍್ಮಲೀಕರಣ, ವಸ್ತು ಪ್ರರ‍್ಶನ ಸಮಿತಿ, ವೇದಿಕೆ ಸಮಿತಿ, ಕ್ರೀಡಾ ಸೇರಿದಂತೆ ಸುಮಾರು ೨೦ಕ್ಕೂ ಅಧಿಕ ಸಮಿತಿಗಳನ್ನು ರಚಿಸಿ ಕರ‍್ಯ ಹಂಚಿಕೆ ಮಾಡಲಾಗಿದ್ದು, ಉತ್ಸವದ ಕರ‍್ಯಕ್ರಮಗಳು ವ್ಯವಸ್ಥಿತ ನರ‍್ವಹಣೆಯಾಗಬೇಕು. ಈ ಹಿನ್ನೆಲೆಯಲ್ಲಿ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕರ‍್ಯನರ‍್ವಹಿಸಬೇಕು ಎಂದರು.
ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕರ‍್ಯಕ್ರಮ, ಕಬಡ್ಡಿ, ಕುಸ್ತಿ, ಸಹಾಸ ಕ್ರೀಡೆ ಮುಂತಾದ ಕ್ರೀಡಾಕೂಟಗಳು, ರಂಗೋಲಿ ಸ್ರ‍್ಧೆ, ವಿಜೃಂಭಣೆಯ ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆ, ವಸ್ತುಪ್ರರ‍್ಶನ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕರ‍್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಕಲಾತಂಡಗಳಿಗೆ ಆದ್ಯತೆ ನೀಡಬೇಕಾಗಿದ್ದು, ಜಿಲ್ಲೆಯಲ್ಲಿರುವ ಹಗಲುವೇಷ, ಬುಡಕಟ್ಟು ಸಮುದಾಯದ ಕಲೆ, ವೀರಗಾಸೆ, ಮಹಿಳಾ ಡೊಳ್ಳು ಕುಣಿತಾ, ಕೋಲಾಟ, ಲಂಬಾಣಿ, ಹಲಗೆ ವಾದನ, ಯಕ್ಷಗಾನ ಸೇರಿದಂತೆ ವಿವಿಧ ಸ್ಥಳೀಯ ಕಲಾಪ್ರಕಾರಗಳನ್ನು ಗುರಿತಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕ್ರಮ ವಹಿಸಬೇಕು.

ಕರ‍್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಹಾಗೂ ಸರ‍್ವಜನಿಕರಿಗೆ ಕುಡಿಯುವ ನೀರು, ಉಪಹಾರದ ವ್ಯವಸ್ಥೆಗೆ ಆಹಾರ ಇಲಾಖೆಯು ಕ್ರಮ ಕೈಗೊಳ್ಳಬೇಕು. ಕರ‍್ಯಕ್ರಮದಲ್ಲಿ ಪಾಲ್ಗೊಳ್ಳಲು ಸರ‍್ವಜನಿಕರಿಗೆ ಅನುಕೂಲವಾಗಲು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾರಿಗೆ ಇಲಾಖೆಯಿಂದ ಹಂಪಿಗೆ ವಿಶೇಷ ಬಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಹಂಪಿ ಉತ್ಸವದ ಅಂಗವಾಗಿ ಶಾಲಾ ಮಕ್ಕಳ ನೃತ್ಯ, ಚಿತ್ರಕಲಾ, ಪ್ರಬಂಧ ಸ್ರ‍್ಧೆಗಳು, ಮೇಳಗಳು ಹಾಗೂ ಇತರೆ ಕರ‍್ಯಕ್ರಮಗಳ ಆಯೋಜನೆ ಕುರಿತಂತೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ, ಕರ‍್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹಂಪಿ ಉತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲು ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ರ‍್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!