ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಜಂಟಿ ಸಭೆ ವಾಣಿಜ್ಯೋದ್ಯಮ ಸಮಸ್ಯೆಗಳ ಪರಿಹಾರಕ್ಕೆ ಚರ್ಚೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,21- ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಜಂಟಿ ಸಭೆಯು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ಯಶಸ್ವಿಯಾಗಿ ನೆರವೇರಿತು.
ಈ ಸಭೆಯಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ವ್ಯಾಪಕ ಚರ್ಚೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಜನಪ್ರಿಯ ರೈತಣ್ಣ ಊಟ, ರೈತಣ್ಣನ ಕ್ಲಿನಿಕ್ ಮತ್ತು ರೈತಣ್ಣನ ಹಾಸಿಗೆ ಸೇವಾ ಯೋಜನೆಗಳಿಗೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ 30 ಪದಾಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಭೇಟಿ ನೀಡಿ, ರೈತಣ್ಣನ ಊಟವನ್ನು ಸವಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ ಅವರು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ರೈತಣ್ಣ ಊಟ, ರೈತಣ್ಣ ಕ್ಲಿನಿಕ್ ದೇಶದಲ್ಲೇ ಗಮನ ಸೆಳೆಯುವ ನಿಸ್ವಾರ್ಥ ಸೇವಾ ಯೋಜನೆ. ಆಹಾರದ ಗುಣಮಟ್ಟ, ರುಚಿಯಲ್ಲಿ ಉತ್ತಮವಾಗಿದೆ. ಈ ಸಂಸ್ಥೆಯು ಕೇವಲ ವ್ಯಾಪಾರಿಗಳು – ಕೈಗಾರಿಕೋದ್ಯಮಿಗಳ ಹಿತಕ್ಕಾಗಿ ಶ್ರಮಿಸುತ್ತಿದೆಯೇ ದೇಶದ ಬೆನ್ನೆಲುಬಾಗಿರುವ ಮತ್ತು ಕೃಷಿ ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ರೈತರ ಒಪ್ಪತ್ತಿನ ಊಟದ ಬಗ್ಗೆ ಚಿಂತನೆ ಮಾಡಿರುವುದು ಸಂಸ್ಥೆಯ ಮಾನವೀಯತೆಗೆ ಸಾಕ್ಷಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಎಸ್. ಬಳಿಗಾರ್ ಅವರು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಬಡ ಮತ್ತು ಮಧ್ಯಮವರ್ಗದ ಯುವಜನತೆಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು – ದೃಢವಾದ ಆರೋಗ್ಯವಂತ ಜೀವವನ್ನು ರೂಪಿಸುವ ರೀತಿಯಲ್ಲಿ ವೃತ್ತಿ ಕೌಶಲ್ಯವನ್ನು ಮತ್ತು ವ್ಯಕ್ತಿತ್ವದ ಮಾರ್ಗದರ್ಶಕವನ್ನು ನೀಡುವ ಜವಾಬ್ದಾರಿಯುತ ಕೆಲಸವು ನಡೆಯುತ್ತದೆ. ಸಂಸ್ಥೆಯ ಸದಸ್ಯರ ಬದ್ಧತೆ, ಶ್ರಮಕ್ಕೆ ಈ ಸಂಸ್ಥೆಯ ಪದಾಧಿಕಾರಿಗಳ ದೂರದೃಷ್ಟಿಯೇ ಕಾರಣ ಎಂದು ಶ್ಲಾಘಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಭವನದಲ್ಲಿ ನಡೆದ ಜಂಟಿ ಸಭೆಯಲ್ಲಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹುಟ್ಟು ಮತ್ತು ಬೆಳವಣಿಗೆ, ವಿವಿಧ ಸೇವೆಗಳ ಕುರಿತು ಹಿರಿಯ ಉಪಾಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಗೌರವಾಧ್ಯಕ್ಷರಾದ ಸಿ. ಶ್ರೀನಿವಾಸರಾವ್ ಅವರು
ಕೈಗಾರಿಕೆಗಳನ್ನು ಬೆಂಗಳೂರಿನ ಹೊರತಾಗಿ ಸ್ಥಾಪಿಸಲು ಪ್ರಯತ್ನ ಮಾಡಬೇಕು.
ಸಿಎ ಕೆ. ರಾಜಶೇಖರ್ ಅವರು ಜಿಎಸ್ಟಿ ಮತ್ತು ತೆರಿಗೆ ಇಲಾಖೆಗಳ ಕುರಿತು, ಹಿರಿಯ ಸದಸ್ಯ ವಿ. ರವಿಕುಮಾರ್ ಅವರು ನಡೆಸುವ ಮಾರ್ಗಗಳು ಮತ್ತು ಶಿಕ್ಷಣದ ಅಭಿವೃದ್ಧಿಗಳ ಕುರಿತು, ವಿ.ರಾಮಚಂದ್ರ ಅವರು ಎಪಿಎಂಸಿ ಹೋಲ್ಸೇಲ್ ವ್ಯಾಪಾರ, ಎಸ್.ಪಿ. ವೆಂಕಟೇಶ್ ಅವರು ಸ್ಪಾಂಜ್ ಐರನ್ ಓರ್ ಸಮಸ್ಯೆಗಳ ಕುರಿತು ತಿಳಿಸಿದ್ದಾರೆ.
ಬಿ.ಮಹಾರುದ್ರಗೌಡ ಅವರು, ಎಪಿಎಂಸಿಯಲ್ಲಿ ಲೀಸ್ ಕಂ ಸೇಲ್ ಡೀಡ್ ಅಡಿಯಲ್ಲಿ ಅಂಗಡಿ ಮಳಿಗೆ ಪಡೆದವರು ಸ್ಥಳೀಯ ಸಂಸ್ಥೆಯ ಆಸ್ತಿ ತೆರಿಗೆ ಪಾವತಿಸುವ ಕುರಿತು ಸಾಕಷ್ಟು ಗೊಂದಲಗಳಿವೆ. ಈ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ್ ಅವರು, ಪತ್ರಿಕಾಗೋಷ್ಠಿಯಲ್ಲಿ, ಸರ್ಕಾರಕ್ಕೆ ವಿಷಯ ತಲುಪಿಸಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ತಿಳಿಸಲಾಗಿದೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಬಿ. ಮಹಾರುದ್ರಗೌಡ ಅವರು ಸ್ವಾಗತಿಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು, ಜಂಟಿ ಸಭೆಯ ಕುರಿತು ಪ್ರಕಟಿಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಾದ್ಯಕ್ಷ ಎ.ಮಂಜುನಾಥ, ಎಸ್.ದೊಡ್ಡನಗೌಡ, ಸೊಂತ ಗಿರಿಧರ, ಜಂಟಿ ಕಾರ್ಯ ದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ಖಜಾಂಚಿ ಪಿ.ಪಾಲಣ್ಣ, ಜಂಟಿ ಖಜಾಂಚಿ ನಾಗಳ್ಳಿ ರಮೇಶ, ಕಾರ್ಯಕಾರಿ ಸಮಿತಿ ಸದಸ್ಯರು, ಉಪ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು. ಹಾಗೂ ವಿವಿಧ ಸಂಘ ಅಧ್ಯ ಕ್ಷರು, ಗೌರವಕಾರ್ಯದರ್ಶಿಗಳು ಪಧಾದಿಕಾರಿಗಳು.
