೧೧೧೧೧

ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಕರುನಾಡ ಬೆಳಗು ಸುದ್ದಿ

ವಿಜಯನಗರ,2-ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಈ ಬಾರಿಯ ಹಂಪಿ ಉತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಏರ್ಪಡಿಸಲಾದ ಫಲ ಪುಷ್ಪ ಪ್ರದರ್ಶನದಲ್ಲಿ ಹಂಪಿಯ ಕಮಲ್ ಮಹಲ್ 2 ಲಕ್ಷ ಚಂಡು ಹೂಗಳು, 1 ಲಕ್ಷ ಗುಲಾಬಿ ಹೂವುಗಳು ಹಾಗೂ ವಿವಿಧ ರೀತಿಯ ಹೂವುಗಳಿಂದ ಅರಳಿದೆ.

ತೋಟಗಾರಿಕೆ ಇಲಾಖೆಯಿಂದ ಫೆ. 2 ರಿಂದ 4 ರವರೆಗೆ ಹಂಪಿ ಮಾತಂಗ ಪರ್ವತ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಫಲ-ಪುಷ್ಷ ಪ್ರದರ್ಶನಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಜನಪ್ರತಿನಿಧಿಗಳು, ಹಲವು ಗಣ್ಯರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.

ಫಲಪುಷ್ಪ ಪ್ರದರ್ಶನದಲ್ಲಿ ಮಳೆ ನೀರು ಕೊಯ್ಲುಘಟಕಗಳು, ಮಿಶ್ರ ತೋಟಗಾರಿಕೆ ಕೃಷಿ ಮಾದರಿ, ಸ್ವಾತಂತ್ರ‍್ಯ ಹೋರಾಟಗಾರರಾದ ಮಹಾತ್ಮ ಗಾಂಧೀಜಿ, ಡಾ. ಬಿ.ಆರ್ ಅಂಬೇಡ್ಕರ್, ಭಗತ್ ಸಿಂಗ್ ಸುಭಾಷ್ ಚಂದ್ರ ಬೋಸ್, ಸಮಾಜ ಸುಧಾರಕರಾದ ಬಸವಣ್ಣ, ಶಿವಕುಮಾರ ಸ್ವಾಮೀಜಿ ಹಾಗೂ ಮಾಜಿ ರಾಷ್ಟçಪತಿಗಳಾದ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಕಲಾಕೃತಿಗಳು ಪ್ರಮುಖ ಆಕರ್ಷಣೆಯಾಗಿವೆ.

ಇನ್ನು ವಿಶ್ವ ವಿಖ್ಯಾತ ಮೈಸೂರು ದಸರಾ ಅಂಬಾರಿ ಹೊರುವ ಅರ್ಜುನ ಆನೆಯ ಪ್ರತಿಕೃತಿಯನ್ನು ಸಹ ಪ್ರದರ್ಶಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ.

Leave a Reply

Your email address will not be published. Required fields are marked *

error: Content is protected !!