118b9c38-64e2-4ffd-8ab6-1b74392d5d7d

ಜನರ ಹಿತರಕ್ಷಣೆಗಾಗಿ ಉತ್ಸವ ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರುನಾಡ ಬೆಳಗು ಸುದ್ದಿ
ವಿಜಯನಗರ,2-ಜನರಿಗಾಗಿ ಹಾಗೂ ಕಲಾವಿದರ ಹಿತರಕ್ಷಣೆಗಾಗಿ ಉತ್ಸವಗಳನ್ನು ಮಾಡುತ್ತಿದ್ದೇವೆ. ಹಂಪಿ ಉತ್ಸವವು ಒಂದು ಸಾಂಸ್ಕೃತಿಕ ಉತ್ಸವವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು.
ಶುಕ್ರವಾರ ಹಂಪಿ ಉತ್ಸವ ಉದ್ಘಾಟನೆಗಾಗಿ ಹೆಲಿಪ್ಯಾಡ್‌ಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
       ಬರಗಾಲ ಇದ್ದರೂ ಸಹ ಉತ್ಸವವನ್ನು ಜನರಿಗಾಗಿ, ಕಲಾವಿದರ ಹಿತರಕ್ಷಣೆಗಾಗಿ ಮಾಡುತ್ತಿದ್ದೇವೆ. ಇದೊಂದು ನಾಡಿನ ಸಾಂಸ್ಕೃತಿಕ ಉತ್ಸವವಾಗಿದೆ ಎಂದರು.
           ಈ ಸಂದರ್ಭದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಯುವಜನ ಸೇವಾ ಮತ್ತು ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ಶಾಸಕರಾದ ಜೆ.ಎನ್.ಗಣೇಶ, ಬಿ.ಎಂ.ನಾಗರಾಜ, ಎಚ್.ಆರ್.ಗವಿಯಪ್ಪ, ಕೆ.ರಾಘವೇಂದ್ರ ಹಿಟ್ನಾಳ, ಅಜೇಯ ಧರ್ಮಸಿಂಗ್, ನಾರಾ ಭರತ್ ರೆಡ್ಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನರಾಜ್ ಸಿಂಗ್, ಐಜಿಪಿ ಲೋಕೇಶಕುಮಾರ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು, ಉಪವಿಭಾಗಾಧಿಕಾರಿ ಮಹದ್‌ಅಲಿ ಅಕ್ರಂ ಷಾ, ಮುಖಂಡರಾದ ಭೀಮಾ ನಾಯ್ಕ, ಪಿ.ಟಿ.ಪರಮೇಶ್ವರ ನಾಯ್ಕ ಸೇರಿದಂತೆ ಹಲವರು ಹಾಜರಿದ್ದರು

Leave a Reply

Your email address will not be published. Required fields are marked *

error: Content is protected !!