IMG-20240206-WA0012

ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ

ಕರುನಾಡ ಬೆಳಗು ಸುದ್ದಿ 

ಕೊಪ್ಪಳ,6- ಜನರಲ್ಲಿ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ಕರ್ನಾಟಕ ಕ್ರಿಯಾಶೀಲತೆಯನ್ನು ಬೆಳೆಸುವ ಮೂಲಕ ಅಕಾಡೆಮಿ ಸ್ಥಾಪನೆ ರಾಜ್ಯ ಘಟಕದ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಬಾವಿ ಮಾತನಾಡಿ, ಕರ್ನಾಟಕ ರಾಜ್ಯ ಪರಿಷತ್ತು ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ಹಲವು ವರ್ಷಗಳಿಂದ ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಬಂದಿದೆ. ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮೌಡ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ. ಇದಕ್ಕೆ ಪೂರಕವಾಗಿ ಸರ್ಕಾರದ “ಅಭಿಮಾನಿ ಅಕಾಡೆಮಿ”ಯನ್ನು ಸ್ಥಾಪಿಸುವ ಮೂಲಕ ಪರಿಷತ್ತಿನ ಕಾರ್ಯಕ್ಕೆ ಶಕ್ತಿ ತುಂಬಬೇಕು ಎಂದು ಒತ್ತಾಯಿಸಲಾಯಿತು. ಈ ಕುರಿತು ಸರ್ಕಾರ ಆಸಕ್ತಿ ವಹಿಸಿ ಶೀಘ್ರ ಅಕಾಡೆಮಿ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿಶ್ವವಿದ್ಯಾಲಯ ಸ್ಥಾಪನೆ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರು ಮನವಿಯನ್ನು ಕಳಿಸಲಾಗುವುದು ಎಂದು ಭರವಸೆ ನೀಡಿದ ಸರ್ಕಾರಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪರಿಷತ್ತಿನ ಸದಸ್ಯರಾದ ಕುಬೇರ ಮಜ್ಜಿಗಿ, ಅಮರೇಶ ಪಾಟೀಲ್, ನಿಂಗಜ್ಜ ಶಹಪುರ್, ಆನಂದ ಕಿನ್ನಾಳ, ಹನುಮಂತಪ್ಪ ಕುರಿ ಸೇರಿದಂತೆ ಹಲವರು ಇದ್ದರು.

Leave a Reply

Your email address will not be published. Required fields are marked *

error: Content is protected !!