WhatsApp Image 2024-02-09 at 4.22.12 PM

ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಗೆ ಸಿಇಓ ರಾಹುಲ್ ಶರಣಪ್ಪ ಸಂಕನೂರ್ ಭೇಟಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,9- ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬಳ್ಳಾರಿ ಜಿಲ್ಲಾ ಚೇಂಬರ್ ಸ್ಕಿಲ್ ಡೆವಲಪ್‌ಮೆಂಟ್  ಸೆಂಟ‌ರ್‌ಗೆ ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲನೆ ಮಾಡಿ, ಹೋಟಲ್ ಮೇನೇಜ್ಮೆಂಟ್ ಕೋರ್ಸ್ ಪ್ರಾರಂಭಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಹಿರಿಯ ಉಪಾಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಗೌರವ ಅಧ್ಯಕ್ಷರಾದ ಸಿ. ಶ್ರೀನಿವಾಸರಾವ್,. ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಉಪಾಧ್ಯಕ್ಷರುಗಳಾದ ಎ. ಮಂಜುನಾಥ್, ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನ, ವಿ. ರಾಮಚಂದ್ರ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ಸ್ವಾಗತಿಸಿ, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ಕಾರ್ಯದಕ್ಷತೆ, ವಿವಿಧ ಕೋರ್ಸ್ಗಳು ಮತ್ತು ಉಚಿತ ತರಬೇತಿ ಪಡೆದವರ ಮಾಹಿತಿಯನ್ನು ನೀಡಿದ್ದಾರೆ.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನ ಅವರು, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ, ಹೊಸದಾಗಿ ಹೋಟಲ್ ಮೇನೇಜ್ಮೆಂಟ್ ಕೋರ್ಸ್ ಪ್ರಾರಂಭಿಸಿ, ಹೋಟಲ್ ಉದ್ಯಮಕ್ಕೆ ಅಗತ್ಯವಿರುವ ಯುವ ಸಿಬ್ಬಂದಿಯನ್ನು ತರಬೇತಿ ನೀಡಿ, ಕೌಶಲ್ಯಪೂರ್ಣ ಉದ್ಯೋಗಿಗಳನ್ನು ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್ ಅವರು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ರೈತಣ್ಣ ಊಟ, ರೈತಣ್ಣ ಕ್ಲಿನಿಕ್ ಮತ್ತು ರೈತಣ್ಣ ಹಾಸಿಗೆಯ ವಿಶೇಷಗಳನ್ನು ತಿಳಿದುಕೊಂಡು, ವಾಣಿಜ್ಯೋದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳಿಂದ ಕೂಡಿರುವ ಸಂಸ್ಥೆ ಜನಸೇವೆಯಲ್ಲಿ ತೊಡಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಹೋಟಲ್ ಮೇನೇಜ್ಮೆಂಟ್ ಕೋರ್ಸ್ ಹಾಗೂ ಇನ್ನಿತರೆ ವಿಷಯಗಳ ಕೋರ್ಸ್ಗಳನ್ನು ಪ್ರಾರಂಭಿಸಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕೈಗಾರಿಕಾ ಕಚೇರಿಯ ನಿರ್ದೇಶಕ ಸೋಮಶೇಖರ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪಿ.ಎಸ್. ಹಟ್ಟಪ್ಪ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!