WhatsApp Image 2024-02-12 at 7.00.44 PM

ವಿಶ್ವ ಕರ್ಮ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.14ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ : ಮೌನೇಶ ಬಡಿಗೇರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ವಿಶ್ವ ಕರ್ಮ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.14ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದು ವಿಶ್ವಕರ್ಮ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮೌನೇಶ ಬಡಿಗೇರ ತಿಳಿಸಿದರು.

ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಜರುಗಿದ ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದರು. ಸಮುದಾಯದ ದೇವಾಲಯಗಳ ನಿರ್ಮಾಣಕ್ಕೆ ಜಾಗವಿಲ್ಲ, ಕೈಗಾರಿಕೆ ನಿವೇಶನ ದೊರೆಯುತ್ತಿಲ್ಲ, ಪಂಚ ಕಸುಬು ಮಾಡುವವರಿಗೆ ಕೈಗಾರಿಕೆ ಇಲಾಖೆಯಿಂದ ನೆರವು ಸಿಗುತ್ತಿಲ್ಲ, ಸಮುದಾಯದ ವಿದ್ಯಾರ್ಥಿ ನಿಲಯಗಳಿಗೆ ಜಾಗವಿಲ್ಲ, ಕಾಂತರಾಜ ಆಯೋಗ ವರದಿ ಜಾರಿ ಮಾಡುತ್ತಿಲ್ಲ,ಕೊಪ್ಪಳದಲ್ಲಿ ಜಗದ್ಗುರು ಮೌನೇಶ್ವರ ದೇವಾಲಯ ನಿರ್ಮಾಣಕ್ಕೆ ಸೂಕ್ತ ಸ್ಥಳವಿಲ್ಲ, ಕೈಗಾರಿಕಾ ಘಟಕ ಸ್ಥಾಪನೆಗೆ ಅನುದಾನ ನೀಡುತ್ತಿಲ್ಲ, ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ದೇವಾಲಯಗಳಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಮುಖ 15 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಮೂಲಕ ಸರ್ಕಾರದ ಗಮನ ಸೆಳೆಯುವ ಉದ್ದೇಶವಿದೆ. ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಿದರು. ಪ್ರಮುಖರಾದ ಬ್ರಹ್ಮಾನಂದ ಬಡಿಗೇರ, ವೀರಭದ್ರಪ್ಪ ಬಡಿಗೇರ, ಪ್ರಶಾಂತ ವಿಶ್ವಬ್ರಾಹ್ಮಣ, ಮಂಜುನಾಥ ಬಡಿಗೇರ ಇದ್ದರು.

Leave a Reply

Your email address will not be published. Required fields are marked *

error: Content is protected !!