WhatsApp Image 2024-02-13 at 4.36.00 PM

ಫೆ. 16 ಸವಿತಾ ಮಹರ್ಷಿ ಜಯಂತಿ : ಶಂಶೇ ಆಲಂ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,13- ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ನಗರಸಭಾ ಸರ್ವರ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಫೆಬ್ರವರಿ 16ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಶಂಶೇ ಆಲಂ ಅವರು ಹೇಳಿದರು.

ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸುವರು ಕರ್ನಾಟಕ ಸರ್ಕಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಕೊಪ್ಪಳ ಲೋಕಸಭಾ ಸಂಸತ್ ಕರಡಿ ಸಂಗಣ್ಣ ಬಳ್ಳಾರಿ ರಾಜ್ಯಸಭಾ ಸಂಸತ್ ಡಾ ನಾಸಿರ್ ಹುಸೇನ್ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಡಾ ಚಂದ್ರಶೇಖರ್ ಬಿ ಪಾಟೀಲ್ ಶಶಿಲ್ ಜಿ ನಮೋಶಿ ವೈ ಎಂ ಸತೀಶ್ ನಗರಸಭಾ ಎಲ್ಲಾ ಸದಸ್ಯರು ತಾಲೂಕ್ ಸಮಾಜದ ಸವಿತಾ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ರಾಷ್ಟ್ರೀಯ ಸಾಕ್ಷರತಾ ಸಮಾಜ ಸುಧಾರಕ ಎ ಅಬ್ದುಲ್ ನಬಿ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸದಸ್ಯರು ಪದಾಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಸವಿತಾ ಮಹರ್ಷಿ ಅವರ ಕುರಿತು ಭಾಷಣ ಕಾರರಿಂದ ಉಪನ್ಯಾಸ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈ ಗಾದಿಲಿಂಗಪ್ಪ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಬಿ ರಾಜೇಶ್ವರಿ, ನಗರಸಭಾ ಪೌರಾಯುಕ್ತ ಎಚ್ಎನ್ ಗುರುಪ್ರಸಾದ್, ಡಿ ವೈ ಎಸ್ ಪಿ ಯು ವೆಂಕಟೇಶ್, ಸಿಪಿಐಎಸ್ ಹನುಮಂತಪ್ಪ, ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿರುವರು ಎಂದು ತಾಹಶಿಲ್ದಾರ್ ಶಂಶೇ ಆಲಂ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!