WhatsApp Image 2024-02-13 at 7.53.41 PM

ಕಿಷ್ಕಿಂಧಾ ಜಿಲ್ಲೆ ರಚನೆಗೊತ್ತಾಯಿಸಿ 1200 ವಿದ್ಯಾರ್ಥಿಗಳಿಂದ ಸರ್ಕಾರಕ್ಕೆ ಪತ್ರ

ಕರುನಾಡ ಬೆಳಗು ಸುದ್ದಿ

ಗಂಗಾವತಿ,14-ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರ ಸ್ಥಾನವನ್ನಾಗಿಸಿಕೊಂಡು ಐತಿಹಾಸಿಕ ಕಿಷ್ಕಿಂಧಾ ಎಂಬ ನೂತನ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಇಲ್ಲಿನ ಸಂಕಲ್ಪ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ 1200 ಮಕ್ಕಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಸ್ವ ಹಸ್ತಾಕ್ಷರಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಬರೆದ ಪತ್ರಗಳನ್ನು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿಯ ಆವರಣದಲ್ಲಿರುವ ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಗಮನ ಸೆಳೆದರು.

ಕೇಂದ್ರ ಬಸ್ ನಿಲ್ದಾಣದ ಹಿಂದೆ ಇರುವ ವಿಜಯನಗರ ಕಾಲೋನಿಯ ಸಂಕಲ್ಪ ಕಾಲೇಜಿನ ಆವರಣದಿಂದ ಜಾಥಾ ನಡೆಸಿದ ವಿದ್ಯಾಥರ್ಿಗಳು, ಶ್ರೀಕೃಷ್ಣದೇವರಾಯ ವೃತ್ತ, ನೀಲಕಂಠೇಶ್ವರ ವೃತ್ತದ ಮೂಲಕ ಪ್ರಧಾನ ಅಂಚೆ ಕಚೇರಿಗೆ ಬಂದು ಬಳಿಕ ಪತ್ರಗಳನ್ನು ಪೋಸ್ಟ್ ಮಾಡಿದರು.

ಗಂಗಾವತಿ ನೂತನ ಜಿಲ್ಲೆಯಾಗಬೇಕು, ಶೈಕ್ಷಣಿಕ, ಆರೋಗ್ಯ ಸೇವೆ ನಮ್ಮ ಹಕ್ಕು, ನಮ್ಮ ಜಿಲ್ಲೆ ನಮ್ಮ ಹಕ್ಕು, ಜಿಲ್ಲೆಯಲ್ಲಿ ಅತಿಹೆಚ್ಚು ತೆರಿಗೆ ಪಾವತಿದಾರರು ನಾವು, ಸರ್ಕಾರ ಸ್ಪಂದಿಸಲೇಬೇಕು ಎಂಬ ಇತ್ಯಾದಿ ಘೋಷಣೆಗಳನ್ನು ವಿದ್ಯಾರ್ಥಿಗಳು ಕೂಗಿದರು.

ನೂತನ ಕಿಷ್ಕಿಂಧಾ ಜಿಲ್ಲೆಯ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಗಂಗಾವತಿ ಶಾಸಕ ಜಿ. ಜನಾರ್ದರೆಡ್ಡಿ ಧ್ವನಿ ಎತ್ತುವ ಮೂಲಕ ಸಿಎಂ ಗಮನಕ್ಕೆ ತರಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

1200ಕ್ಕೂ ಹೆಚ್ಚು ಮಕ್ಕಳು ಪತ್ರಗಳನ್ನು ಹಿಡಿದು ತಂದಿದ್ದರಿಂದ ಅಂಚೆಪೆಟ್ಟಿಗೆಯಲ್ಲಿ ಹಿಡಿಸಲಿಲ್ಲ. ಬಳಿಕ ಅಂಚೆ ಕಚೇರಿಯ ಸಿಬ್ಬಂದಿ ಪ್ಲಾಸ್ಟಿಕ್ ಚೀಲದಲ್ಲಿ ಪತ್ರಗಳನ್ನು ಹಾಕಿಸಿಕೊಂಡು ವಿಧಾನಸೌಧಕ್ಕೆ ತಲುಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷ ನಾಗರಾಜ್ ಗುತ್ತೇದಾರ, ಪ್ರಾಂಶುಪಾಲ ಬಸಪ್ಪ ಸಿರಿಗೇರಿ, ಜಿಲ್ಲಾ ಹೋರಾಟ ಸಮಿತಿಯ ಕಾಯರ್ಾಧ್ಯಕ್ಷ ಸಿಂಗನಾಳ ಸುರೇಶ, ಪ್ರಮುಖರಾದ ಮಂಜುನಾಥ ಕಟ್ಟಿಮನಿ, ಅನ್ನಪೂರ್ಣಸಿಂಗ್, ಉಗಮರಾಜ್ ಬಂಬ್, ಪವನಕುಮಾರ ಗುಂಡೂರು ಮಾತನಾಡಿದರು.

Leave a Reply

Your email address will not be published. Required fields are marked *

error: Content is protected !!