ಸಿರುಗುಪ್ಪ:ಫೆ.17 ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ
ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, ೧೫- ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಜಗಜ್ಯೋತಿ ಬಸವಣ್ಣನವರ ಸರ್ಕಲ್ ನಲ್ಲಿ ಬೆಳಿಗ್ಗೆ 10:00ಗೆ ಸಮಾರಂಭ ಆಯೋಜಿಸಬೇಕು ಎಂದು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್ ಸೂಚನೆ ನೀಡಿದರು.
ಅವರು ಸಿರುಗುಪ್ಪ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಆಯೋಜಿಸಿದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರದ ಅನಾವರಣ ಸಮಾರಂಭ ಕುರಿತು ಅವರು ಮಾತನಾಡುತ್ತಾ 12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ ಕಾಯಕದ ಮಹತ್ವ ಮತ್ತು ವರ್ಗ ರಹಿತ ಸಮಾಜ ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿರುತ್ತಾರೆ.
ಅಲ್ಲದೆ ಜಗಜ್ಯೋತಿ ಬಸವಣ್ಣನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಾಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ಭಾರತ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಶ್ರೀ ಜಗಜ್ಯೋತಿ ಬಸವಣ್ಣನ ವರನ್ನು ರಾಜ್ಯ ಸರ್ಕಾರವು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದು ಅವರು ಸಭೆಯಲ್ಲಿ ತಿಳಿಸಿದರು.
ಬಸವ ಬಳಗದ ಅಧ್ಯಕ್ಷ ಎನ್ ಎಂ ಶಿವಪ್ರಕಾಶ್ ಅವರು ಮಾತನಾಡಿ ಕರ್ನಾಟಕದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಅದರಂತೆ ಫೆಬ್ರವರಿ 17ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮತ್ತು ತಾಲೂಕ ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮ ಆಯೋಜಿಸಲು ರಾಜ್ಯ ಸರ್ಕಾರ ನಿರ್ದೇಶಿಸುದುದಕ್ಕೆ ಸರ್ಕಾರವನ್ನು ಅಭಿನಂದಿಸಿದರು.
ಶಿವಕುಮಾರ್ ಬಳಿಗಾರ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸರ್ಕಾರ ಆದೇಶ ನೀಡಿದ್ದಕ್ಕೆ ಸರ್ಕಾರಕ್ಕೆ ಹೃತ್ಪೂರ್ವಕವಾಗಿ ಕೃತಜ್ಞತೆಗಳು ತಿಳಿಸಿದರು.
ಪವನ್ ಕುಮಾರ್ ಎಸ್ ದಂಡಪ್ಪನವರ್ ಅವರು ಮಾತನಾಡಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರದ ಕೆಳಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿಬರಹ ಮುದ್ರಿಸಿ ಅಳವಡಿಸಬೇಕು ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಥವಾ ಜಾಲತಾಣ https://udyogamela.skill connect.kaushalkar.com/ ನಲ್ಲಿ ಡೌನ್ಲೋಡ್ ಮಾಡಿಕೊಳ್ಳ ಬಹುದು ಎಂದು ಪವನ್ ಕುಮಾರ್ ಎಸ್ ದಂಡಪ್ಪನವರ್ ತಿಳಿಸಿದರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಏ ಗಾದಿಲಿಂಗಪ್ಪ ಜಗಜ್ಯೋತಿ ಬಸವಣ್ಣ ಕಾಯಕ ಶ್ರೀ ರಾಜ್ಯ ಪ್ರಶಸ್ತಿ ವಿಜೇತರು ಸಮಾಜ ಸುಧಾರಕರಾದ ಎ ಅಬ್ದುಲ್ ನಬಿ ವೇದಿಕೆದಲ್ಲಿದ್ದರು ಮಲ್ಲಿಕಾರ್ಜುನ ಗೌಡ ವಿರುಪಾಕ್ಷಗೌಡ ಪ್ರಭುಗೌಡ ಪಂಪಾಪತಿ ಗೌಡ ಒತೂರು ತಹಸಿಲ್ದಾರ್ ಕಚೇರಿಯ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಮುದಾಯದವರು ಸಾರ್ವಜನಿಕರು ಪೂರ್ವಭಾವಿ ಸಭೆಯಲ್ಲಿ ಇದ್ದರು.
