da95aa0e-6384-4150-8e55-30567ad82e28

 ತುಂಗಭದ್ರಾ ನದಿಗೆ ನೀರು
ಅನಧೀಕೃತವಾಗಿ ನೀರೆತ್ತುವುದಕ್ಕೆ ನಿಷೇಧ 

ಡಿಸಿ ಎಂ ಎಸ್ ದಿವಾಕರ್

ಕರುನಾಡ ಬೆಳಗು ಸುದ್ದಿ

ಹೊಸಪೇಟೆ (ವಿಜಯನಗರ) ಫೆ.20 –  ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುತ್ತಿದ್ದು ಅನಧಿಕೃತವಾಗಿ ನದಿಯಲ್ಲಿ ಪಂಪಸೆಟ್‌ ಅಳವಡಿಸಿರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.

2023-24ನೇ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆಬ್ರವರಿ 18 ರಿಂದ ಫೆ23ರವರೆಗೆ ಪ್ರತಿ ದಿನ 500 ಕ್ಯೂಸೆಕ್ಸ್ ನಂತೆ (0.26 ಟಿ.ಎಂ.ಸಿ) ನೀರನ್ನು ಹರಿಸಲು ಅನುಮತಿ ನೀಡಿ ಆದೇಶವಾಗಿರುವ ಪ್ರಯುಕ್ತ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ನದಿ ದಂಡೆಯಲ್ಲಿ ಅಳವಡಿಸಿರುವ ಅನಧೀಕೃತ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ನಿಷೇಧಿಸುವುದು ಹಾಗೂ ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲೀ, ಜನರು ಮತ್ತು ದನಕರುಗಳನ್ನು ನದಿಗೆ ಇಳಿಸುವುದಾಗಲಿ ಹಾಗೂ ನಿರ್ಮಾಣ ಕಾಮಗಾರಿಗಳನ್ನು ನದಿಯಲ್ಲಿ ನಡೆಸುತ್ತಿರುವುದು ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲು ಈ ಆದೇಶ ಹೊರಡಿಸಿದೆ.
ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹರಪ್ಪನಹಳ್ಳಿಯ ಸಹಾಯಕ ಆಯುಕ್ತರು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಈ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!