WhatsApp Image 2024-02-21 at 12.45.44 PM

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅಧಿಕಾರ ಸ್ವೀಕಾರ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,21- ಬಳ್ಳಾರಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದವರಾಗಿದ್ದಾರೆ. ಈ ಹಿಂದೆ ಚಾಮರಾಜನಗರ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ನಿಕಟಪೂರ್ವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಟಿ.ಹೀರಲಾಲ್ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಚಂದ್ರಶೇಖರ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!