ಮುಸ್ಲಿಂ ಸಮುದಾಯ ರಾಜಕೀಯ ಶಕ್ತಿಯಾಗಿ ಬೆಳೆಯ ಬೇಕು : ರಿಯಾಜ್ ಪರಂಗಿಪೇಟೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 25- ಮುಸ್ಲಿಂ ಸಮುದಾಯ ಅನಿವಾರ್ಯದ ರಾಜಕೀಯದ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದೆ. ಒಗ್ಗಟ್ಟಾಗಿ ರಾಜಕೀಯ ಶಕ್ತಿಯಾಗಿ ಬೆಳೆಯುವ ಬಗ್ಗೆ ಮುಸ್ಲಿಂರು ಆತ್ಮಾವಲೋಕನ ಮಾಡಬೇಕಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಎಚ್ಚರಿಸಿದರು.
ಅವರು ನಗರದ ರವಿವಾರ ಶಾದಿಮಹಲ್ ಎಸ್ಡಿಪಿಐ ಪಕ್ಷದ ಸಮಾವೇಶ ಉದ್ಘಾಟಿಸಿ ಬಿಜೆಪಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಎಸ್ಡಿಪಿಐ ಸಂವಿಧಾನದ ಆಶಯಗಳೊಂದಿಗೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಕ್ಷದ ಕಾರ್ಯಕರ್ತರು ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತಲು ಸಿದ್ದರಿರಬೇಕು. ಪಕ್ಷ ಯಾವುದೇ ಧರ್ಮದ ವಿರೋಧಿ ಅಲ್ಲ ಎಲ್ಲರನ್ನು ಸಮಾನವಾಗಿ ಕಾಣುತ್ತೇವೆ ಎಂದರು.
ಕಾಂಗ್ರೆಸ ನಿಂದ ಮೋಸ : ರಾಜ್ಯದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು 95% ಓಟು ಕಾಂಗ್ರೆಸ್ ಗೆ ಹಾಕಿದ್ದು ಸಮುದಾಯದ ವಿದ್ಯಾರ್ಥಿನಿಯರು ಕಾಲೇಜ್ ನಲ್ಲಿ ನೆಮ್ಮದಿಯಿಂದ ಓದಲು ಅವಕಾಶ ಕೊಡ್ತಾರೆ , ದೌರ್ಜನ್ಯ ಮಾಡುವ ಸಂಘಟನೆ , ವ್ಯಕ್ತಿಗಳನ್ನು ಜೈಲಿಗೆ ಹಾಕುತ್ತಾರೆ ಅಂತ. ಆದರೆ ಮುಸ್ಲಿಂ ಮಹಿಳೆಯರ ಅವಹೇಳನ ಮಾಡಿದ ಪ್ರಭಾಕರ ಭಟ್ ಬಂಧಿಸಲು ಆಗಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
ರಾಜ್ಯ ಸರ್ಕಾರಕ್ಕೆ 2 ಬಿ ಮುಸ್ಲಿಂ ಮೀಸಲಾತಿ ಸಿಗುವ ನಿರೀಕ್ಷೆ ಸುಳ್ಳಾಗಿದೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡುವ ಮಾತು ಹೇಳಿದ್ರು ಬಜೆಟ್ ನಲ್ಲಿ 1 % ಗಿಂತ ಕಡಿಮೆ ಅನುದಾನ ಘೋಷಿಸಿದ್ದಾರೆ ಇದು ರಾಜ್ಯ ಸರ್ಕಾ ಮುಸ್ಲಿಂ ಮರಿಗೆ ಮಾಡುತ್ತಿರು ದ್ರೋಹವಾಗಿದೆ.
ದೇಶದಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ.ದೇಶದಲ್ಲಿ ಬಿಜೆಪಿ ಸೋಲಿಸುವುದು ಇಂಡಿಯಾ ಮೈತ್ರಿಕೂಟದಿಂದ ಸಾಧ್ಯವಿಲ್ಲ. ದಲಿತರು ಅಲ್ಪಸಂಖ್ಯಾತರು ಸೇರಿದ ಪಕ್ಷಗಳ ಮಹಾಮೈತ್ರಿಯಿಂದ ಬಿಜೆಪಿ ಸೋಲಿಸಲು ಸಾಧ್ಯ. ಆದರೆ ಇಂಡಿಯಾ ಮೈತ್ರಿಕೂಟದಲ್ಲಿ ಮುಸ್ಲಿಂ ನಾಯಕತ್ವದ ಪಕ್ಷಗಳನ್ನು ಸೇರಿಸಿಕೊಂಡಿಲ್ಲ. ರಾಜ್ಯದಲ್ಲಿ ಮೂರು ಲೋಕಸಭಾ ಕ್ಷೇತ್ರದಲ್ಲಿ ಎಸ್ಡಿಪಿಐ ಸ್ಪರ್ಧಿಸಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಹುಜೂರ್ ಅಹಮದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಜಾಮುದ್ದಿನ್ ಮಾಳೆಕೊಪ್ಪ , ಜಿಲ್ಲಾ ಸಮಿತಿ ಸದಸ್ಯ ಸಲೀಂ ಖಾದ್ರಿ , ಪಕ್ಷದ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹಮ್ಮದ್ ಸಾದಿಕ್, ಕಾರ್ಯದರ್ಶಿ ಅರ್ಷದ್ ಶೇಕ್, ಉಪಾಧ್ಯಕ್ಷ ಫಾರೂಕ್, ಜಿಲ್ಲಾ ಅಧ್ಯಕ್ಷರು ಸಲೀಂ ಮನಿಯಾರ್ ಜಿಲ್ಲಾ ಕಾರ್ಯದರ್ಶಿ ಯುಸೂಫ್ ಮೋದಿ ಇದ್ದರು.

