ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರೈತ ಮೋರ್ಚಾ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,3- ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಇಂದು ಬಳ್ಳಾರಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮತ್ತು ಪದಾಧಿಕಾರಿಗಳ ಪರಿಚಯ ಸಭೆ ನಡೆಸಲಾಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಅನಿಲ್ ಕುಮಾರ ಮೋಕಾ ಬಳ್ಳಾರಿ ಬಿಜೆಪಿ ಜಿಲ್ಲಾಧ್ಯಕ್ಷರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಗಾಳಿ ಶಂಕರಪ್ಪ, ಗಣಪಾಲ ಐನಾಥ್ ರೆಡ್ಡಿ, ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಗೌಡ, ರೈತ ಮೋರ್ಚಾ ಸಹ ಪ್ರಭಾರಿ ಶ್ರೀಮತಿ ಸುಮ ರೆಡ್ಡಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿ.ಎಸ್.ಶಂಕರ, ಶರಣಗೌಡ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
