3f4be097-7cd3-4531-bd18-3cd88720e993

ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ 45 ದಿನಗಳ ಹೋಟಲ್ ಮೇನೇಜ್ಮೆಂಟ್ ತರಬೇತಿ ಪ್ರಾರಂಭ

ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ಮಾ. 04 – ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ದಿ ಕೇಂದ್ರವು ಅತ್ಯಲ್ಪಾವಧಿಯಲ್ಲಿ ಹೋಟಲ್ ಮ್ಯಾನ್ಮೇಜ್ಮೆಂಟ್ನ ಕೌಶಲ್ಯಗಳನ್ನು ಕಲಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೌಶಲ್ಯಾಬಿವೃದ್ಧಿ ಇಲಾಖೆಯ ಜಂಟಿ ಆಶ್ರಯದಲ್ಲಿ ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಪ್ರಾರಂಭಿಸಿರುವ ಹೋಟೆಲ್ ಮೇನೇಜ್ಮೆಂಟ್ ಕೌಶಲ್ಯ ಅಭಿವೃದ್ಧಿ ಕೇಂದ್ರÀಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅತ್ಯಲ್ಪಾವಧಿಯಲ್ಲಿ ಅಚ್ಚುಕಟ್ಟಾಗಿ ಸುಸಜ್ಜಿತವಾಗಿ ಕೋರ್ಸ್ಗೆ ಅಗತ್ಯವಾದ ಕಿಚನ್, ರೆಸ್ಟೋರೆಂಟ್, ಬೆಡ್, ಹೌಸ್ಕೀಪಿಂಗ್, ಕಂಪ್ಯೂಟರ್ ಬಿಲ್ಲಿಂಗ್ ವ್ಯವಸ್ಥೆ ತರಬೇತಿಗೆ ಸ್ಟಾರ್ ಹೋಟಲ್ ಮಾದರಿಯಲ್ಲಿ ಎಲ್ಲವನ್ನೂ ಕೌಶಲ್ಯ ಕೇಂದ್ರದಲ್ಲಿ ಸಿದ್ಧವಾಗಿರುವುದು ವೃತ್ತಿಪರತೆಯನ್ನು ತೋರುತ್ತದೆ ಎಂದರು.
ಜಿಲ್ಲಾ ಪಂಚಾಯತಿಯ ಬಳ್ಳಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಯುವಪೀಳಿಗೆಯು ಡಿಗ್ರಿ ಪದವಿಯ ನಂತರ, ಕೌಶಲ್ಯದ ಕೊರತೆಯ ಕಾರಣ ಸೂಕ್ತ ಉದ್ಯೋಗಗಳು, ಸೂಕ್ತವಾದ ವೇತನ ಸಿಗದೇ ಪರದಾಡುತ್ತಿದ್ದಾರೆ. ಅನೇಕ ಯುವಕರಿಗೆ ಹೋಟಲ್ ಮೇನೇಜ್ಮೆಂಟ್ ತರಬೇತಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಬಳ್ಳಾರಿ ಚೇಂಬರ್ರ್ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಸಿಗುವ ಹೋಟಲ್ ಮೇನೇಜ್ಮೆಂಟ್ ತರಬೇತಿಯು ಗುಣಮಟ್ಟದಿಂದ ಕೂಡಿದೆ. ಇಲ್ಲಿ ತರಬೇತಿ ಪಡೆದವರಿಗೆ ತ್ವರಿತವಾಗಿ ಉದ್ಯೋಗ ಸಿಗಲಿದೆ ಎಂದು ಹೇಳಿ, ಕೌಶಲ್ಯ ಕೇಂದ್ರದ ವಿವಿಧ ತರಬೇತಿಗಳನ್ನು ವಿವರಿಸಿ, ಸಂಸ್ಥೆಯು ಕಾರ್ಯಕಾರಿ ಸಮಿತಿ ಸದಸ್ಯರ ಒಮ್ಮತದ ನಿರ್ಧಾರಗಳ ಪ್ರಕಾರ ಪಾರದರ್ಶಕವಾಗಿ, ನಿಸ್ವಾರ್ಥವಾಗಿ, ಲಾಭರಹಿತವಾಗಿ ನಡೆಯುತ್ತಿದೆ. ಸಂಸ್ಥೆಯ ದೈನಂದಿನ ಆಡಳಿತ ಮತ್ತು ಸಂಸ್ಥೆಯ ಸಾಂಸ್ಥಿಕ ವ್ಯವಸ್ಥೆಯು ಕಾನೂನುಬದ್ಧವಾಗಿದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನ ಗೌಡ ಅವರು, ಹೋಟಲ್ ಮೇನೇಜ್ಮೆಂಟ್ ಕೌಶಲ್ಯಾಭಿವೃದ್ಧಿ ತರಬೇತಿ ಕುರಿತು ವೃತ್ತಿಯ ಅರ್ಹತೆಗಳು ಮತ್ತು ಅಗತ್ಯತೆಗಳು, ನೈಪುಣ್ಯತೆ – ಶಿಸ್ತು, ಸಂಯಮಗಳ ಕುರಿತು ಮಾತನಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವಾಧ್ಯಕ್ಷರಾದ ಸಿ. ಶ್ರೀನಿವಾಸ್, ಹೋಟಲ್ ಮೇನೇಜ್ಮೆಂಟ್ ಕುರಿತಾದ 45 ದಿನಗಳ ಕೌಶಲ್ಯ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ತರಬೇತಿಯ ನಂತರ ಅಭ್ಯರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಆಸಕ್ತರು ಕೋರ್ಸ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಹೋಟಲ್ ಮೇನೇಜ್ಮೆಂಟ್ ತರಬೇತಿಗೆ ಆಯ್ಕೆಯಾಗಿರುವ 60 ಅಭ್ಯರ್ಥಿಗಳು, ಯಾವುದೇ ವೃತ್ತಿಯ ನೈಪುಣ್ಯತೆಯನ್ನು ಹೆಚ್ಚಿಸುವ ಕೌಶಲ್ಯಗಳ ತರಬೇತಿಗೆ ವಿಶೇಷ ತರಬೇತಿಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಿಲ್ಲಾಡಳಿತದ ನೆರವಿನಿಂದ ತರಬೇತಿ ನೀಡಲು ಮುಂದಾಗಿರುವುದು ನಮ್ಮಂಥವರ ಬಾಳಿನಲ್ಲಿ ಹೊಸಬೆಳಕು ಮೂಡಿಸಿದಂತೆ ಆಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಉದ್ಯೋಗಾಧಿಕಾರಿಗಳು ಹಾಗೂ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್. ಹಟ್ಟಪ್ಪ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರುಗಳಾದ ಎ. ಮಂಜುನಾಥ್, ಎಸ್. ದೊಡ್ಡನಗೌಡ, ಸೊಂತಾ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ, ಕೌಶಲ್ಯಾಭಿವೃದ್ಧಿ ಕೇಂದ್ರದ ಚೇರ್ಮೆನ್ ನಾಗಳ್ಳಿ ರಮೇಶ್, ಪತ್ರಿಕಾ ಮತ್ತು ಮಾಧ್ಯಮ ಕಮಿಟಿ ಚೇರ್ಮೆನ್ ಟಿ. ಶ್ರೀನಿವಾಸರಾವ್ ಅವರು ವೇದಿಕೆಯಲ್ಲಿದ್ದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಬಿ. ಮಹಾರುದ್ರಗೌಡ ಅವರು ಸ್ವಾಗತ ಕೋರಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಉಪ ಕಮಟಿಗಳ ಚೇರ್ಮನ್ಗಳು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ಕಾರ್ಯಕ್ರದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!