ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಎ.ವಾಯ್.ಲೋಕರೆ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ,6- ವಿದ್ಯಾರ್ಥಿಗಳಿಗೆ ಪ್ರರಿಶ್ರಮದಿಂದ ಮುಂದೆ ಬರಬೇಕೆ ಹೊರತು ಅನ್ಯಮಾರ್ಗವಿಲ್ಲ ಎಂದು ಎ.ವಾಯ್.ಲೋಕರೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ತಾಲೂಕಿನ ಹಿರೇಅರಳಿಹಳ್ಳಿ ಬನಶ್ರೀ ಪ್ರಾಥಮಿಕ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಉಧ್ಘಾಟಿಸಿ ಮಾತನಾಡಿದ ಅವರು . ಪ್ರಸ್ತುತ ದಿನಗಳಲ್ಲಿ ಅಂಕಗಳ ಜೊತೆಗೆ ಜೀವನದ ಮೌಲ್ಯಗಳ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನಿರಾಶೆಯಾಗಬಾರದು. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಕಠಿಣ ಪರಿಸ್ಥಿತಿ ಎದುರಿಸುವ ಛಲ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ರಾಜ್ಯ ಸಮಿತಿ ಸದಸ್ಯ ಹಾಗೂ ಬನಶ್ರೀ ಪ್ರಾಥಮೀಕ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಶೇಖರಗೌಡ ರಾಮತ್ನಾಳ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಪ್ರಮುಖವಾಗಿರುತ್ತದೆ. ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಸಕರಾತ್ಮಕ ಚಿಂತನೆಗಳ ಮೈಗೂಡಿಸಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಮುನ್ನಡೆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಸಾಧನೆ ಮಾಡಬೇಕಾದರೆ ನಿರಂತರ ಪ್ರಯತ್ನ ಅಗತ್ಯವಾಗಿದೆ. ಮಕ್ಕಳ ಬಗ್ಗೆ ಪಾಲಕರು ಬಹಳಷ್ಟು ನಿರೀಕ್ಷೆಗಳನ್ನಟ್ಟು ಕೊಂಡಿರುತ್ತಾರೆ. ಪಾಲಕರು ಮಕ್ಕಳ ಮನಸ್ಸು ಅರ್ಥಮಾಡಿಕೊಳ್ಳಬೇಕು. ಮಕ್ಕಳಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿಯಿದೆಯೋ ಆದೇ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸಬೇಕು. ಅಂದಾಗ ಮಾತ್ರ ಮಕ್ಕಳು ನಿಶ್ಚಿತ ಗುರಿ ತಲುಪುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪ್ರವೀಣ್ ಕುಮಾರ ಅವ್ವಣ್ಣನವರ, ನಾಗರಾಜ ಕಾಮನೂರು ಮಹಾಂತೇಶ ದಮ್ಮೂರು ಮಠ, ಲಕ್ಷ್ಮಿ ಗೊರೆಬಾಳ, ಅದೇಶ್ ಸಿಂಗ್ರಿ ಮಲ್ಲಿಕಾರ್ಜುನ ಗೋರೆಬಾಳ, ಶಾರದಾ ಪಾಟೀಲ್, ಪ್ರಮೀಳಾ ರಂಜಣಗಿ, ಬಸವ ರಾಜೇಶ್ವರಿ, ಹೆಚ್ ಹೆಚ್.ಗಡಾದ ಹಾಜರಿದ್ದರು.
