1709809973508

ಹಂಪಿ ಯೋಜನೆಗೆ ಶಂಕುಸ್ಥಾಪನೆ ಸಂತಸದ ಸಂಗತಿ : ವೈ.ದೇವೇಂದ್ರಪ್ಪ

ಕರುನಾಡ ಬೆಳಗು ಸುದ್ದಿ

ವಿಜಯನಗರ,7- ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವಿಜಯನಗರ ಜಿಲ್ಲೆ ಹಾಗೂ ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಕೇಂದ್ರ ಪುರಸ್ಕೃತ ಸ್ವದೇಶ ದರ್ಶನ್ 2.0 ಯೋಜನೆಯಡಿ ಹಂಪಿಯ ವಿವಿಧ ಪರಿಸರದಲ್ಲಿ ಡೆವಲಪಮೆಂಟ್ ಆಫ್ ಟ್ರಾವೆಲ್ಲೆರ್ ನೂಕ್ಸ್ ಹಂಪಿ ಯೋಜನೆಯ ಶಂಕುಸ್ಥಾಪನೆಯ ವರ್ಚುವಲ್ ಲಾಂಚ್ ನೇರಪ್ರಸಾರ ಕಾರ್ಯಕ್ರಮವು ಗುರುವಾರ ರÀಂದು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಎದುರುಗಡೆ ನಡೆಯಿತು.

ಬಳ್ಳಾರಿಯ ಸಂಸದರಾದ ವೈ.ದೇವೇಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಂಪಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲರ ಆದ್ಯ ಕರ್ತವ್ಯವಾಗಿದೆ. ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಹಂಪಿ ಅಭಿವೃದ್ಧಿಗೆ ಅನುಕೂಲವಾಗುತ್ತಿದೆ. ಈಗಾಗಲೇ ಹಂಪಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ನಿಷ್ಠಾವಂತ ಅಧಿಕಾರಿಗಳು ಬಂದಿರುವುದರಿಂದ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯುತ್ತಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ ಅವರು ಮಾತನಾಡಿ, ಪುರಾತತ್ವ ಇಲಾಖೆಯ ಒಪ್ಪಿಗೆಯ ಮೇರೆಗೆ, ಬೇರೆ ಯಾವುದೇ ಇಲಾಖೆಗೆ ತೊಂದರೆಯಾಗದAತೆ 3 ವಿಧದ 20 ಟ್ರಾವೆ¯ರ್ ನೂಕ್ಸ್ಗಳಿಗೆ ಅನುಮೋದನೆ ಕೊಡಲಾಗಿದೆ. ದೇವಸ್ಥಾನದಿಂದ ಆನೆಗುಂದಿಯವರೆಗೆ ಟ್ರಾವೆ¯ರ್ ನೂಕ್ಸ್ಗಳನ್ನು ಮಾಡಲು ತೀರ್ಮಾನಿಸಲಾಗಿದೆ. ದೇವಸ್ಥಾನ ಮತ್ತು ಪ್ರವಾಸಿ ತಾಣಗಳಲ್ಲಿ, ಭಕ್ತಾದಿಗಳು, ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಎಲ್ಲರಿಗೂ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು ಬಿ.ಎಲ್., ಸಹಾಯಕ ಆಯುಕ್ತರಾದ ಮೊಹಮ್ಮದ್ ಅಲಿ ಅಕ್ರ ಷಾಹ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಪ್ರಭುಲಿಂಗ ಎಸ್. ತಾಳಿಕೇರಿ, ಹೊಸಪೇಟೆ ತಹಸೀಲ್ದಾರರಾದ ಶೃತಿ ಎಂ ಎಂ, ಹಂಪಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರಜೀನಿ ಷಣ್ಮುಖ ಗೌಡ, ಉಪಾಧ್ಯಕ್ಷರು ಸದಸ್ಯರು, ಮಾರ್ಗದರ್ಶಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!