ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳು ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ,15- ರಾಷ್ಟ್ರೀಯ ಆರೋಗ್ಯ ಅಭಿಯಾನದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಾರ್ಯಕ್ರಮದಡಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಲಯದಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವಿ.ಬಿ.ಡಿ ಆಪ್ತ ಸಮಾಲೋಚಕರು, ಹಣಕಾಸು ಮತ್ತು ಲಾಜಿಸ್ಟಿಕ್ ಸಹಾಯಕರು ಹುದ್ದೆಗಳಿಗೆ ತಲಾ ಒಂದೊಂದು ಸ್ಥಾನಗಳು ಖಾಲಿ ಇರುತ್ತವೆ. ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚುಗೊಳಿಸುವುದು ಅಥವಾ ಕಡಿಮೆಗೊಳಿಸುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನಿರ್ಧಾರದಂತಿರುತ್ತದೆ. ಆಯ್ಕೆಯ ಪ್ರಕ್ರಿಯೆ ಯಾವುದೇ ಬದಲಾವಣೆಯಾದರು ಆಯ್ಕೆ ಸಮಿತಿ ತಿರ್ಮಾನವೇ ಅಂತಿಮವಾಗಿರುತ್ತದೆ. ಕೋವಿಡ್-19 ರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು. 6 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.2, 6 ತಿಂಗಳು, 1 ದಿನದಿಂದ 12 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.4, 12 ತಿಂಗಳು, 1 ದಿನದಿಂದ 18 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.6, 18 ತಿಂಗಳು, 1 ದಿನದಿಂದ 24 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.8 ಕೃಪಾಂಕ ನೀಡಲಾಗುವುದು.
ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೇರಿಟ್ ಲೀಸ್ಟನ್ನು ತಯಾರಿಸಲಾಗುವುದು. ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲಾಗುವುದು.
ಅರ್ಜಿಗಳು ದೊರೆಯುವ ಮತ್ತು ಸ್ವೀಕರಿಸಲು ಮಾ.19ರವರೆಗೆ ಅವಕಾಶವಿರಲಿದೆ. ಅರ್ಜಿಗಳನ್ನು ಕಚೇರಿಯ ಸಮಯದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ 60 ಹಾಸಿಗೆಯ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗ ಮಸೀದಿ ಹತ್ತಿರ ಹೊಸಪೇಟೆ ಇಲ್ಲಿ ಮಾ.19ರ ಸಂಜೆ 5.30 ರೊಳಗೆ ಸ್ವೀಕರಿಸಲಾಗುವುದು ಸಂಜೆ 5.30 ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ವಿ.ಬಿ.ಡಿ.ಸಿ.ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
