ಎಂಡಿಆರ್‌ಎಸ್ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,15- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 2024-25 ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರರಿಸಲಾಗಿದೆ.
ಪೋಷಕರು ಅಥವಾ ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆ ಅಥವಾ ಅಲ್ಪಸಂಖ್ಯಾತ ಮಾಹಿತಿ ಕೇಂದ್ರಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಅಥವಾ dom.karnataka.gov.in/koppal/public ನಲ್ಲಿ ನೇರವಾಗಿ ಅರ್ಜಿ ಮಾ.31 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ ದೂ.ಸಂ: 08539-225070 ಮೊ.ಸಂ: 8088892549, ಇನ್ನುಳಿದ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578, ಯಲಬುರ್ಗಾ ಮೊ.ಸಂ: 9620522537 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
