2c136fae-be38-4577-97e1-318669006cc9

ಭಾಗ್ಯನಗರ : ಕನ್ನಡ ಭಾಷೆ ನಾಮಫಲಕಗಳ ಅಳವಡಿಕೆಗೆ ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,15- ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ನಾಮಫಲಕಗಳನ್ನು ಬಳಸಬೇಕು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ – 2024ರ ಪ್ರಕಾರ ಭಾಗ್ಯನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ಮೇಲೆ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಯು ಶೇ.60 ರಷ್ಟಿರಬೇಕು ಹಾಗೂ ಕನ್ನಡ ಭಾಷೆಯು ನಾಮಫಲಕದ ಮೇಲ್ಭಾಗದಲ್ಲಿರಬೇಕು.

ಮಾಲೀಕರು ದಪ್ಪ ಅಕ್ಷರದಲ್ಲಿ ಕಾಣುವಂತೆ ಕನ್ನಡ ಶಬ್ದಗಳನ್ನು ಬಳಸಿ ಫಲಕವನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿದ್ದು ಕಂಡು ಬಂದರೆ ಉದ್ಯಮ ಪರವಾನಿಗೆಯನ್ನು ರದ್ದುಪಡಿಸಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!