WhatsApp Image 2024-03-16 at 4.34.20 PM

ನಿಮಗೆ ಬೇಡವಾದ ಮಗುವನ್ನ ಎಲ್ಲಂದರಲ್ಲಿ ಬಿಸಾಡಬೇಡಿ ಸರ್ಕಾರದ ತೊಟ್ಟಿಲುಗೆ ಹಾಕಿ : ಅವಿನಾಶ್

ಕರುನಾಡ ಬೆಳಗು ಸುದ್ದಿ

ವಿಜಯನಗರ,16- ಗರ್ಭಣಿ ಆದ ಸಮಯದಲ್ಲಿ ವೈದ್ಯರು ನಿರ್ಲಕ್ಷ್ಯ ಮಾಡದೇ ಜಾಗುರುಕತೆಯಿಂದ ಚಿಕಿತ್ಸೆ ನೀಡಿದಾಗ ತಾಯಿ ಮತ್ತು ಮಗು ಜೀವ ಉಳಿಯುತ್ತದೆ ಎಂದು ಜಿಲ್ಲಾ ಅಂಗವಿಕ ಕಲ್ಯಾಣಧಿಕಾರಿ ಅವಿನಾಶ್ ಹೇಳಿದರು.

ಅವರು ಹೊಸಪೇಟೆ ನಗರದಲ್ಲಿ ಶುಕ್ರವಾರ ತಾ.ಪಂ ವಿದ್ಯಾರಣ್ಯ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಚೈತನ್ಯ ಗ್ರಾಮೀಣಾಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ ಕ Adoption Regulations-2022 ರ) ವಿಷಯಗಳಿಗೆ ವೈದ್ಯರು, ನರ್ಸ್ ಹಾಗೂ ಇತರೆ ಆಸ್ಪತ್ರೆ ಸಿಬ್ಬಂದಿಗಳಿಗೆ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ಕುಟುಂಬದಲ್ಲಿ ಗರ್ಭಿಣಿಯಾದ ಮಹಿಳೆಗೆ ಪ್ರತಿ ತಿಂಗಳಿಗೊಮ್ಮೆ ಆಸ್ಪತ್ರೆಗೆ ತೊರಿಸಿದಾಗ ಗರ್ಭದಲ್ಲಿರುವ ಮಗು ಮತ್ತು ತಾಯಿ ಆರೋಗ್ಯವಾಗಿ ಇರುತ್ತದೆ. ನಿಮಗೆ ಬೇಡವಾದ ಮಗುವನ್ನ ಸರ್ಕಾರದ ತೊಟ್ಟಿಲುಗೆ ಹಾಕಿ ನಿಮ್ಮ ಹೆಸರನ್ನು ಎಲ್ಲೂ ಬಹಿರಂಗ ಪಡಿಸುವುದಿಲ್ಲ ಹಸುಗೂಸನ್ನ ಎಲ್ಲಂದರಲ್ಲಿ ಬಿಸಾಡಬೇಡಿ ಆ ಮಗುವಿಗೆ ಕೂಡು ಬದುಕುವ ಹಕ್ಕು ಇದೆ. ಪ್ರತಿಯೊಂದು ಮಗುವಿಗೆ ಉತ್ತಮ ಆರೋಗ್ಯ ಮತ್ತು ಉತ್ತಮ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಸಮಾಜದಲ್ಲಿ ಅದೇಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಬೈಕ್ ಗ್ಯಾರೇಜ್ ಗಳಲ್ಲಿ ಬಟ್ಟೆ ಅಂಗಡಿಗಳಲ್ಲಿ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುತ್ತಾರೆ ಜತೆಗೆ ಬಾಲ್ಯ ವಿವಾಹ, ಅಪ್ರಾಪ್ತೆ ಬಾಲಕಿಯರು ಗರ್ಭಿಣಿಯದ ಘಟನಗಳು ನಡೆದರೆ ನೈತಿಕವಾಗಿ ನಾವು ಹೊಣೆಯನ್ನ ಹೋರಬೇಕಾಗುತ್ತದೆ. ಹಾಗಾಗಿ ಆಶಾ ಕಾರ್ಯಕರ್ತೆಯರಿಂದ ಹಿಡಿದು ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಬಹಳ ಎಚ್ಚರಿಕೆಯಿಂದ ಪ್ರತಿಯೊಬ್ಬರು ಕೆಲಸ ಮಾಡಬೇಕಿದೆ, ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲಾ ಇಲಾಖೆಗಳು ಒಂದಾಗಿ ಕೆಲಸ ಮಾಡಿದಾಗ ಮಾತ್ರ ಇಂತಹ ಪ್ರಕರಣಗಳನ್ನು ತಡೆಗಟ್ಟುವುದಕ್ಕೆ ಸಾಧ್ಯವಾಗುತ್ತದೆ.

ಸಮಾಜದಲ್ಲಿ ಮೊದಲು ಅರಿವು ಮೂಡಿಸುವ ಕಾರ್ಯ ಆಗಬೇಕು. ಬಾಲ್ಯ ವಿವಾಹ, ದೌರ್ಜನ್ಯ, ಭಿಕ್ಷಾಟನೆ, ಬಾಲ ಕಾರ್ಮಿಕ ಪದ್ಧತಿ ಸೇರಿದಂತೆ ಹಲವು ಆಯಾಮಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕಿದೆ. ಬಾಲ್ಯ ವಿವಾಹವನ್ನು ತಡೆಯುವ ಮಹತ್ತರ ಕೆಲಸ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನಿಯವಾಗಿದೆ ಇನ್ನು ಕೆಲವೊಂದು ಕಡೆ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಂತ ಅಪರಾಧಗಳನ್ನ ತಡೆಯುವಲ್ಲಿ ಇನ್ನೊಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕಿದೆ. ಮೊದಲು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡುವ ಕಾರ್ಯ ಆಗಬೇಕು. ಗ್ರಾಮೀಣ ಮಟ್ಟದಿಂದ ಹಿಡಿದು, ನಗರ ಪ್ರದೇಶಗಳಲ್ಲೂ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕೆಲಸ ವಾಗಬೇಕು.

ಮಕ್ಕಳು ಶಾಲೆಗೆ ಹೋಗುವಂತೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರದ್ದಾಗಿದೆ ಎಂದರು. ಯುನೆಸಫ್ ನ ಸಂಯೋಜಕರಾದ ಕೊಪ್ಪಳ ಹರಿಶ್ ಜೋಗಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಬಾಲ್ಯ ವಿವಾಹ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಕಾಯ್ದೆಯ ಕುರಿತು ಜಾಗೃತಿ ಮೂಡಿಸಬೇಕು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಾನೂನು ರೀತ್ಯ ಕ್ರಮವಹಿಸಬೇಕು.

ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಪೋಕ್ಸೋ ಕಾಯ್ದೆ-2012ಅನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ಜೊತೆಗೆ ಈ ಕಾಯ್ದೆ ಅಂಶಗಳನ್ನು ಪ್ರಚುರಪಡಿಸಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಎಸ್ ಮಾತನಾಡಿದರು. ಜಿಲ್ಲಾ ಕುಷ್ಟುರೋಗ ನಿಯಂತ್ರಣಾಧಿಕಾರಿ ಡಾ.ರಾಧಿಕ ಮಾತನಾಡಿದರು. ಪ್ರಾಸ್ತವಿಕವಾಗಿ ಜಿಲ್ಲಾ ಮಕ್ಕಳ ಘಟಕದ ರಕ್ಷಣಾಧಿಕಾರಿ ಸುಧೀಪ್ ಕುಮಾರ್ ಉಂಕಿ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ತಾ.ಪಂ ಸಹಾಯಕ ನಿರ್ದೇಶಕಿ ಶಮೀಮ್ ಭಾನು, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಮಕ್ಕಳ ರಕ್ಷಣಾ ಘಟಕದ ಗಂಗಾಧರ್ ಡಿ, ಶರಣಪ್ಪ, ಶ್ರೀಕಾಂತ, ಲಿಂಗರಾಜ ಸಖಿ ಘಟಕ, ಆಸ್ಪತ್ರೆ ಸಿಬ್ಬಂದಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!