WhatsApp Image 2024-03-26 at 4.24.54 PM

ಕಡಿಮೆ ಮತದಾನ ನಡೆದ ಮತಗಟ್ಟೆಗಳಲ್ಲಿ ಮತದಾನ ಹೆಚ್ಚಿಸುವ ಕ್ರಮ : ಸಿ ಈ ಓ ರಾಹುಲ್ ಶರಣಪ್ಪ ಸಂಕನೂರು

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ- ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಡಿಮೆ ಮತದಾನ ನಡೆದ ಮತಗಟ್ಟೆಗಳನ್ನು ಗುರುತಿಸಿ ಅಂತ ಮತಗಟ್ಟೆಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಿ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜಿಲ್ಲಾ ಸ್ವೀಪ್ ಅಧ್ಯಕ್ಷರಾದ ರಾಹುಲ್ ಶರಣಪ್ಪ ಸಂಕನೂರ್ ಅವರು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಆಯೋಜಿಸಿದ ಜಿಲ್ಲಾ ಆಡಳಿತ ಜಿಲ್ಲಾ ಸ್ವೀಪ್ ಸಮಿತಿ ತಾಲೂಕ ಆಡಳಿತ ತಾಲೂಕು ಸ್ವೀಪ್ ಸಮಿತಿ ಜಿಲ್ಲಾ ಪಂಚಾಯತ್ ಬಳ್ಳಾರಿ ತಾಲೂಕು ಪಂಚಾಯತ್ ಸಿರುಗುಪ್ಪ ತಾಲೂಕು ಆಡಳಿತ ಸಹಯೋಗದಲ್ಲಿ 08 ಕೊಪ್ಪಳ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಮತದಾರರಿಗೆ ಮತದಾನದ ಜಾಗೃತಿ ಮೂಡಿಸುವ92- ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿ ಬಿಎಲ್ಓಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿದರು.

ಸಿರುಗುಪ್ಪ ಮತಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಅವಶ್ಯಕ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಶೌಚಾಲಯ ನೆರಳಿನ ವ್ಯವಸ್ಥೆ ವಿಕಲ ಚೇತನರಿಗೆ ರಾಂಪ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು ಉದ್ಯೋಗ ಶಿಕ್ಷಣ ಮುಂತಾದ ಕಾರಣಗಳಿಗೆ ವಲಸೆ ಹೋದವರನ್ನು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನ ವೊಲೀಸಬೇಕು ಶೇಕಡವಾರು ಮತದಾನದ ಪ್ರಮಾಣ ಹೆಚ್ಚಿಸಲು ಅವಶ್ಯವಿರುವ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಹೊಸದಾಗಿ ಗುರುತಿಸಿದ ಮತಗಟ್ಟೆಗೆ ಭೇಟಿ ನೀಡಿ ಎಲ್ಲಾ ಸೌಕರ್ಯಗಳಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಕೆಲವರು ಬೆಂಗಳೂರು ಮುಂಬೈ ಹೈದರಾಬಾದ್ ವಿವಿಧ ಕಡೆಗೆ ವಲಸೆ ಹೋಗುತ್ತಾರೆ ಅಂತಹವರನ್ನು ಗುರುತಿಸಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ನರೇಗಾ ಯೋಜನೆ ಬಗ್ಗೆ ಮಾಹಿತಿ ನೀಡಿ ಅವರ ಮನ ವೋಲಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ವನ್ನು 71 ರಷ್ಟು ಹೆಚ್ಚಿ ಸಲಾಗಿತ್ತು ಈ ಬಾರಿ ಬರ ಹಾಗೂ ಕಾರಣಗಳಿಗೆ ಕಳೆದ ಎರಡು ತಿಂಗಳುಗಳ ಹಿಂದೆಯೇ ತಾಲೂಕಿನ ಜನರು ಗೂಳೆ ಹೋಗಿದ್ದು ಅವರ ಮನ ವೋಲಿಸಿ ಮತ ದಾನದಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ಹೇಳಿದರು.

ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವದ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ರಾಂಪ್ ಹಾಗೂ ಶಾಮಿಯಾನ ವ್ಯವಸ್ಥೆ ಕಲ್ಪಿಸಲು ಯೋಜನೆ ಸಿದ್ಧಪಡಿಸಲಾದ ವಿವರಿಸಿ ಮಾಹಿತಿ ನೀಡಿದರು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಅವರು ಮಾತನಾಡಿದರು.

ತಹಸಿಲ್ದಾರ್ ಶಂಶೇ ಆಲಂ ಸರ್ವರನ್ನು ಸ್ವಾಗತ ಬಯಸಿದರು.

ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್ ಸರ್ವರನ್ನು ವಂದನಾರ್ಪಣೆ ಮಾಡಿದರು.

ತಾಲೂಕ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!