
ಅಕ್ರಮ ಮದ್ಯ ಹೊಂದುವುದು, ಸಾಗಾಣಿಕೆ : 3 ಪ್ರಕರಣ ದಾಖಲು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,27- ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ಅಕ್ರಮ ಮದ್ಯ ಹೊಂದುವಿಕೆ, ಸಾಗಾಣಿಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 3 ಪ್ರಕರಣಗಳನ್ನು ಬುಧವಾರ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಮಾಹಿತಿ ಮೇರೆಗೆ ಓರ್ವ ಮನೆಯಲ್ಲಿ ಶೋಧನೆ ಮಾಡಿ, ಅಕ್ರಮವಾಗಿ ಹೊಂದಿದ್ದ 20.160 ಲೀ (ಅಂದಾಜು ಮೌಲ್ಯ ರೂ.15034) ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ.
ಬಳ್ಳಾರಿ ನಗರದ ಬಂಡಿಹಟ್ಟಿ ರಸ್ತೆಯಲ್ಲಿ ರಸ್ತೆಗಸ್ತು ವೇಳೆ ದ್ವಿಚಕ್ರ ವಾಹನದಲ್ಲಿ 8.820 ಲೀ (ಅಂದಾಜು ಮೌಲ್ಯ ರೂ.43920) ಮದ್ಯ ಸಾಗಾಣಿಕೆ ಮಾಡುತ್ತಿರುವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ ಪ್ರಕರಣ ದಾಖಲಿಸಲಾಗಿದೆ.
ಬಳ್ಳಾರಿ ತಾಲ್ಲೂಕಿನ ಮಿಂಚೇರಿ ಗ್ರಾಮದಲ್ಲಿ ಗಸ್ತು ವೇಳೆ ದ್ವಿಚಕ್ರ ವಾಹನದಲ್ಲಿ 32.940 ಲೀ (ಅಂದಾಜು ಮೌಲ್ಯ ರೂ. 14660) ಮದ್ಯವನ್ನು ಅನಧೀಕೃತವಾಗಿ ಸಾಗಾಣಿಕೆ ಮಾಡುತ್ತಿರುವ ವ್ಯಕ್ತಿ ಮತ್ತು ಮದ್ಯ ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.