
65 ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಪರೀಕ್ಷೆ
ಕರುನಾಡ ಬೆಳಗು ಸುದ್ದಿ
ವಿಜಯನಗರ,27- ಜಿಲ್ಲೆಯಲ್ಲಿ ಎರಡನೇ ದಿನವು ಸಹ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ನೆರವೇರಿತು. ಮಾರ್ಚ್ 27 ರಂದು ನಡೆದ ಎಸ್ಸೆಸ್ಸೆಲ್ಸಿಯ ಸಮಾಜ ವಿಜ್ಞಾನ ಪರೀಕ್ಷೆಗೆ ಒಟ್ಟು 20,170 ವಿದ್ಯಾರ್ಥಿಗಳು ಹಾಜರಾಗಿದ್ದರು. 290 ವಿದ್ಯಾರ್ಥಿಗಳು ಗೈರಾಗಿದ್ದರು.
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2768, ಹೊಸಪೇಟೆ ತಾಲೂಕಿನಲ್ಲಿ 5712, ಹೂವಿನಹಡಗಲಿ ತಾಲೂಕಿನಲ್ಲಿ 2929, ಕೂಡ್ಲಿಗಿ ತಾಲೂಕಿನಲ್ಲಿ 4627 ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ 4114 ವಿದ್ಯರ‍್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.