
ಜಿಲ್ಲಾಡಳಿತದಿಂದ ಸರಳ ಅಗ್ನಿ ಬನ್ನಿರಾಯ ಜಯಂತಿ ಆಚರಣೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,28- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಗುರುವಾರ ಸರಳವಾಗಿ ಆಚರಿಸಲಾಯಿತು.
ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಹೊಂಗಿರಣ ಸಭಾಂಗಣದಲ್ಲಿ ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.