
ಭಾಗ್ಯನಗರ ಪ.ಪಂ : ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,30- ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಬ್ಬ ಉದ್ದಿಮೆದಾರರು ಪುರಸಭೆ ಅಧಿನಿಯಮ 1964 ರ ಕಲಂ 256 ರಡಿ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
ಎಲ್ಲ ಉದ್ದಿಮೆದಾರರು 2024-25 ನೇ ಸಾಲಿನ ಉದ್ದಿಮೆ ಪರವಾನಿಗೆ ಪಡೆಯಬೇಕು ಮತ್ತು ಪ್ರತಿವರ್ಷ ಪರವಾನಿಗೆಯನ್ನು ನವೀಕರಣ ಮಾಡಿಸಿಕೊಳ್ಳಬೇಕು. ಅದರೊಂದಿಗೆ ನೀರಿನ ಕರ ಹಾಗೂ ಆಸ್ತಿ ತೆರಿಗೆಯನ್ನು ಕಡ್ಡಾಯವಾಗಿ ಭರಿಸಬೇಕು.
ತಪ್ಪಿದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.