ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ಹೆಗಡೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 2- ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ಹೆಗಡೆ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ನೇಮಕದ ಆದೇಶವನ್ನು ಹೊರಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸಲು ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅತಿ ಹೆಚ್ಚು ಸ್ಥಾನಗಳನ್ನು ತರಲು ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಇವರಿಗೆ ಜಿಲ್ಲಾ ಮಟ್ಟದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಟಾಸ್ಕ್ ಫೋರ್ಸ್ ಜಿಲ್ಲಾ ಸಂಚಾಲಕರಾಗಿ, ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರಾಗಿ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಜಂಟಿ ಸಂಯೋಜಕರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಇವರು ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಡಾಕ್ಟರ್ ಸೈಯದ್ ನಾಸಿರ್ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ, ಶಾಸಕರು, ನಾರಭರತ್ ರೆಡ್ಡಿ, ಜೆಏನ್ ಗಣೇಶ್, ಬಿ ಎಂ ನಾಗರಾಜ್, ಪಕ್ಷದ ಹಿರಿಯ ಮುಖಂಡರು ನಾರಾ ಸೂರ್ಯನಾರಾಯಣ ರೆಡ್ಡಿ, ಕೆ ಎಸ್ ಎಲ್ ಸ್ವಾಮಿ, ಬುಡ ಅಧ್ಯಕ್ಷ ಆಂಜನೇಯಲು, ಲೀಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್ ಗಳ ಜೊತೆಗೆ ಹಲವಾರು ಮುಖಂಡರು ಪಕ್ಷದ ಕಾರ್ಯಕರ್ತರು ವೆಂಕಟೇಶ್ ಅವರನ್ನ ಅಭಿನಂದಿಸಿದ್ದಾರೆ.
