WhatsApp Image 2024-04-07 at 1.18.22 PM

ಲೋಕಸಭಾ ಚುನಾವಣೆ : ಅಂಗ ವಿಕಲರಿಂದ ಮತದಾನ ಜಾಗೃತಿ ಜಾತ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 7- ಲೋಕಸಭಾ ಚುನಾವಣೆ ಮತದಾರರು ತಪ್ಪದೆ ಮತದಾನ ಮಾಡಬೇಕು ಈ ಬಗ್ಗೆ ಜಾಗೃತಿ ಮೂಡಿಸಲು ಅಂಗವಿಕಲರ ಮೂಲಕ ಜಾಗೃತಿ ಜಾತ ಹಮ್ಮಿಕೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಅಧಿಕಾರಿ ಪ್ರದೀಪ್ ಅವರು ಜಾತಾಗೆ ಚಾಲನೆ ನೀಡಿದ ಅವರು ಮಾತನಾಡಿ ಸಿರುಗುಪ್ಪ ನಗರಸಭೆ ತಾಲೂಕು ಆಡಳಿತ ತಾಲೂಕು ಪಂಚಾಯತ್ ಸ್ವೀಪ್ ಸಮಿತಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ತಾಲೂಕಾ ಕ್ರೀಡ ಮೈದಾನದಿಂದ ಮತದಾನ ಜಾಗೃತಿ ಜಾತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮಾಜದ ಪ್ರತಿಯೊಂದು ವರ್ಗದವರು ತಪ್ಪದೆ ಮತದಾನ ಮಾಡುವಂತೆ ಉತ್ತೇಜಿಸುವುದು ಈ ಜಾತದ ಮುಖ್ಯ ಉದ್ದೇಶವಾಗಿದೆ ಎಂದರು ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಅವರು ಕರೆಕೊಟ್ಟರು.

ತಾಲೂಕ ಪಂಚಾಯತ್ ವ್ಯವಸ್ಥಾಪಕಿ ಕೋರಿ ಸುಜಾತ ರಾಷ್ಟ್ರೀಯ ಸಾಕ್ಷರತಾ ಸದಸ್ಯ ಅಬ್ದುಲ್ ನಬಿ, ಅಂಗನವಾಡಿ ಮೇಲ್ವಿಚಾರಕಿ ಮಹಾದೇವಮ್ಮ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಗ್ರಾಮಗಳ ಅಂಗವಿಕಲರು ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

error: Content is protected !!