ಆನೆಗೊಂದಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ
ಕರುನಾಡ ಬೆಳಗು ಸುದ್ದಿ
ಗಂಗಾವತಿ, 7- ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗೊಂದಿಯ ಕಡೆ ಬಾಗಿಲು ಬೆಟ್ಟದ ಮೇಲ್ಭಾಗದಲ್ಲಿ ಪ್ರಸಕ್ತ ಶಕ 1527ರ ವಿಜಯನಗರ ಕಾಲದ ಶಾಸನ ಪತ್ತೆಯಾಗಿದೆ. ಎಂದು ಎಂದು ಡಾ. ಕೋಲ್ಕಾರ್ ತಿಳಿಸಿದ್ದಾರೆ.
ಮಣ್ಣಿನಲ್ಲಿ ಹೂತು ಹೋಗಿದ್ದ ಶಾಸನವನ್ನು ಪೂರ್ಣ ಸ್ವಚ್ಛಗೊಳಿಸಿ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಶಾಸನವನ್ನು ಪರಿಶೀಲಿಸಿ ಓದಿ ಅದರ ಮಹತ್ವ ಗುರುತಿಸಿದ್ದಾರೆ.
ಶಾಸನವು ೮ ಸಾಲುಗಳಲ್ಲಿದ್ದು, ಸ್ವಸ್ತಿ ಶ್ರೀ ಜಯದ್ ಉದಯ ಶಾಲಿವಾಹನ ಶಕ ವರುಷ 1449 ನೆಯ ಕಾಲವನ್ನು ಉಲ್ಲೇಖಿಸುತ್ತಿದ್ದು ಅದು ಪ್ರಸಕ್ತ ಶಕ 1527 ಕ್ಕೆ ಸರಿಯಾಗುತ್ತದೆ. ಶಾಸನದಲ್ಲಿ ಆನೆಗೊಂದಿಯ ಮಹಾ ಪ್ರಧಾನ ಲಕ್ಕಿ ಶೆಟ್ಟಿಯ ಮಗನಾದ ವಿಜಯನಾಥನು ಬೆಟ್ಟದ ಮೇಲಿನ ವೀರಭದ್ರ ದೇವರನ್ನು ಆರಾಧಿಸಿದ ಸಂಗತಿ ಈ ಬರೆಯಲ್ಪಟ್ಟಿದೆ.
ಶಾಸನದಲ್ಲಿ ಪ್ರಾಸಂಗಿಕವಾಗಿ ಆನೆಗೊಂದಿಯನ್ನು ಹಸ್ತಿನಾವತಿ ಎಂದು ಅದು ಪಂಚಕೋಶ ಮಧ್ಯದಲ್ಲಿತೆಂದು ಹೇಳಲಾಗಿದೆ ಮತ್ತು ಅದಕ್ಕೆ ಕಿಷ್ಕಿಂಧ ಪರ್ವತ ಎಂದು ಕೂಡ ಹೆಸರಿತ್ತು ಎಂದು ಉಲ್ಲೇಖಿಸಲಾಗಿರುವುದು ಗಮನಾರ್ಹವಾದ ಸಂಗತಿಯಾಗಿದೆ.
ಆನೆಗೊಂದಿಯೆ ರಾಮಾಯಣ ಕಾಲದ ಕಿಷ್ಕಿಂದ ಎಂದು ಗುರುತಿಸಲು ನೇರವಾಗಿ ಆನೆಗೊಂದಿಯಲ್ಲಿ ಯಾವ ಶಾಸನಗಳು ದೊರೆತಿರಲಿಲ್ಲ. ಆನೆಗೊಂದಿ ಯಿಂದ ದೂರದ ದೇವಘಾಟ್ ಮತ್ತು ಹುಲಿಗಿಗಳ ಶಾಸನಗಳಲ್ಲಿ ಮಾತ್ರ ಕಿಷ್ಕಿಂದೆಯ ಉಲ್ಲೇಖವಿತ್ತು. ಪ್ರಸ್ತುತ ಆನೆಗೊಂದಿಯ ಈ ಶಾಸನವೇ ಕಿಷ್ಕಿಂಧಾ ಪರ್ವತ ಎಂದು ಉಲ್ಲೇಖಿಸಿರುವುದು ಕಿಸ್ಕಿಂದ ಮತ್ತು ಆಂಜನೇಯನ ಜನ್ಮಸ್ಥಳಗಳ ಬಗೆಗಿನ ವಾದ ವಿವಾದಗಳ ಸಂದರ್ಭದಲ್ಲಿ ಈ ಉಲ್ಲೇಖ ತುಂಬಾ ಮಹತ್ವ ಪಡೆದುಕೊಂಡಿದೆ , ಕರ್ನಾಟಕದ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟ ವೆ ಆಂಜನೇಯನ ಜನ್ಮಸ್ಥಳವೆಂದು ಗುರುತಿಸಲು ಈ ಶಾಸನ ಮತ್ತೊಂದು ದಾಖಲೆಯಾಗಿದೆ ಎಂದರು.
ಶಾಸನ ಶೋಧನೆ ಹಾಗೂ ಪ್ರತಿ ಮಾಡಿಕೊಳ್ಳುವಲ್ಲಿ ಕಿಷ್ಕಿಂದಾ ಚಾರಣ ಬಳಗದ ಹರ ನಾಯಕ್ ,ಸಂತೋಷ್ ಕುಂಬಾರ್, ಅರ್ಜುನ್. ಆರ್, ಮಂಜುನಾಥ್ ಇಂಡಿ, ವಿಜಯ್ ಬಳ್ಳಾರಿ, ಆನಂದ ಚೌಡಕಿ, ವೀರೇಶ್ ಡಗ್ಗಿ ಹಾಗೂ ಇತರ ಸದಸ್ಯರು ನೆರವಾಗಿದ್ದಾರೆ ಎಂದರು.

