ಚಿಕ್ಕಮಾದಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಲಾಪುರ ಗ್ರಾಮದ ಮತದಾನ ಜಾಗೃತಿ ಕಾರ್ಯಕ್ರಮ (3)

ಪಿಡಿಒ ಬಸವರಾಜ್ ಸಂಕನಾಳ ಅವರಿಂದ ಕಡ್ಡಾಯವಾಗಿ ಮತದಾನ ಮಾಡಲು ಕರೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 8- ಮೇ.07 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಬಸವರಾಜ್ ಸಂಕನಾಳ ಕರೆ ನೀಡಿದರು.

ಚಿಕ್ಕಮಾದಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಲಾಪುರ ಗ್ರಾಮದ ಕೂಲಿಕಾರರಿಗೆ ನರೇಗಾದಡಿ ನಾಲಾ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಇಂದು ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತ ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಿದೆ. ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅತ್ಯಅಮೂಲ್ಯವಾದದ್ದು, ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.

ನಂತರ ತಾಲೂಕು ಐಇಸಿ ಸಂಯೋಜಕ ಶಿವಕುಮಾರ್ ಕೆ. ಅವರು ಮಾತನಾಡಿ, ನರೇಗಾ ಯೋಜನೆಯಡಿ ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಈಗಾಗಲೇ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಪ್ರಾರಂಭವಾಗಿದ್ದು, ಗ್ರಾಮ ಪಂಚಾಯತಿಗೆ ನಮೂನೆ-6 ಬೇಡಿಕೆ ಸಲ್ಲಿಸಿ ಕೆಲಸ ಪಡೆಯಿರಿ. ನರೇಗಾ ಕೂಲಿ ಮೊತ್ತವು 316 ರಿಂದ 349 ರೂ ಹೆಚ್ಚಳವಾಗಿದೆ. ಬೇಸಿಗೆ ಇರುವುದರಿಂದ ಕೆಲಸದಲ್ಲಿ 30% ರಿಯಾಯಿತಿ ಸಹ ಇದೆ ಎಂದು ತಿಳಿಸಿದರು.

ಬಳಿಕ ನರೇಗಾ ಕೂಲಿಕಾರರಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಈ ವೇಳೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ವೆಂಕೋಬ, ತಾಂತ್ರಿಕ ಸಹಾಯಕ ಸಯ್ಯದ್ ಪಾಶಾ, ಬಿಎಫ್‌ಟಿ ಮಾರುತಿ, ಗ್ರಾಮ ಕಾಯಕ ಮಿತ್ರ ಸುನೀತಾ ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು ಹಾಗೂ ಕೂಲಿಕಾರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!