2c136fae-be38-4577-97e1-318669006cc9

ಉಚ್ಚಂಗಿದುರ್ಗ ಜಾತ್ರೆ : ಮದ್ಯ ಮಾರಾಟ ನಿಷೇಧಿಸಿ ಆದೇಶ

ಕರುನಾಡ ಬೆಳಗು ಸುದ್ದಿ

ವಿಜಯನಗರ, 8- ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆಯುವ ಶ್ರೀ ಉತ್ಸವಾಂಭ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಸುಗಮವಾಗಿ ನಡೆಯಲು ಹಾಗೂ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಏ. 9ರ ಬೆಳಿಗ್ಗೆ 6 ಗಂಟೆಯಿಂದ ಏ. 10ರ ಬೆಳಿಗ್ಗೆ 6 ಗಂಟೆಯವರೆಗೆ ಉಚ್ಚಂಗಿದುರ್ಗ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಮದ್ಯದಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ್ ಅವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!