WhatsApp Image 2024-04-14 at 2.15.10 PM

ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 14- ಸಾಮಾಜಿಕ ಸಾಮರಸ್ಯವನ್ನು ಒಡೆಯುವ ಜಾತಿ ಭಾವನೆಗಳನ್ನು ತೊಡದುಹಾಕಿ ಭಾರತೀಯರು ಎಲ್ಲರೂ ಭಾವನಾತ್ಮಕವಾಗಿ ಮತ್ತು ಸಾಮಾಜಿಕವಾಗಿ ಒಂದು ಪ್ರಬುದ್ದ ರಾಷ್ಟವಾಗಿ ನಿಲ್ಲಲು ಒತ್ತಾಯಿಸಿದ ಮಹಾನ್ ನಾಯಕ ಎಂದು ಗ್ರಾಮ ಪಂಚಾಯತಿ ಪಿಡಿಒ ದೇವಿಂದ್ರಪ್ಪ ಜರ೯ಲಿ ಹೇಳಿದರು.

ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಗ್ರಾಮ ಪಂಚಾಯಿತಿಯ ಕಛೇರಿ ಯಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತ ರತ್ನ. ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಮಹಾ ಮಾನವತಾವಾದಿ.ಸಮಾನತೆಯ ಹರಿಕಾರ. ಸಂವಿಧಾನ ಶಿಲ್ಪಿ ಇವರ ತತ್ವ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಕೂಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು. ಅಧ್ಯಕ್ಷ.ಉಪಾಧ್ಯಕ್ಷ ಸವ೯ ಸದಸ್ಯರು ಮತ್ತು ಸಂಗಮೇಶ ಬಂಗಾರಿ.ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಇತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!