2c136fae-be38-4577-97e1-318669006cc9

ಲೋಕಸಭಾ ಚುನಾವಣೆ : ಸಾಮಾನ್ಯ ವೀಕ್ಷಕರ ಆಗಮನ ಸಾರ್ವಜನಿಕರ ಭೇಟಿಗೆ ಅವಕಾಶ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 19- ಭಾರತ ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭಾ ಚುನಾವಣೆ-2024 ರ ಅಧಿಸೂಚನೆ ಹೊರಡಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರನ್ನಾಗಿ ಹೇಮ ಪುಷ್ಪ ಶರ್ಮಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಜಿಲ್ಲೆಗೆ ಆಗಮಿಸಿದ್ದು, ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೂ ಜಿಲ್ಲಾ ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಲಭ್ಯವಿರುತ್ತಾರೆ. ಇವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 10 ಗಂಟೆಯಿAದ 11 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಿ ಲೋಕಸಭಾ ಚುನಾವಣೆಗೆ ಸಂಬAಧಿಸಿದ ಅಹವಾಲು, ಮಾಹಿತಿಯನ್ನು ಸಲ್ಲಿಸಬಹುದಾಗಿದೆ. ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ: 8310453436 ಗೆ ಕರೆ ಮಾಡಿಯೂ ಅಹವಾಲು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!