KB

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಯುಕ್ತ ಇಂದು ನಾಟಕ ಪ್ರದರ್ಶನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 15- ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೊಪ್ಪಳ ಮೀಡಿಯಾ ಕ್ಲಬ್ ವತಿಯಿಂದ ಶನಿವಾರ (ಇಂದು) ಸಂಜೆ ೫ ಗಂಟೆಗೆ ಇಲ್ಲಿನ ಸಾಹಿತ್ಯ ಭವನದಲ್ಲಿ ‘ಸಬ್ ಎಡಿಟರ್ ಸುಬ್ರಾಯ ಸತ್ತ ಮೇಲೆ’ ಎನ್ನುವ ಹೊಸ ಅಲೆಯ ನಾಟಕ ಪ್ರದರ್ಶನವಾಗಲಿದೆ.

ಪತ್ರಕರ್ತರೇ ನಾಟಕದಲ್ಲಿ ಅಭಿನಯಿಸುತ್ತಿದ್ದು, ಪತ್ರಕರ್ತ ಶರತ್ ಹೆಗ್ಡೆ ನಾಟಕ ರಚಿಸಿದ್ದಾರೆ. ರಂಗ ಶಿಕ್ಷಕ ಗುರುರಾಜ ಎಲ್. ನಿರ್ದೇಶನ ಮಾಡಿದ್ದಾರೆ. ಒಂದೇ ಪ್ರದರ್ಶನ ಇರಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ರಾಜಶೇಖರ ಹಿಟ್ನಾಳ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಜನಾರ್ದನ ರೆಡ್ಡಿ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್ ಪಾಲ್ಗೊಳ್ಳುವರು. ಮೀಡಿಯಾ ಕ್ಲಬ್ ಅಧ್ಯಕ್ಷ ರವೀಂದ್ರ ವಿ.ಕೆ. ಅಧ್ಯಕ್ಷತೆ ವಹಿಸುವರು.

ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಮಾಜಿ ಸಂಸದ ಸಂಗಣ್ಣ ಕರಡಿ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ, ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಕೊಪ್ಪಳ ವಾರ್ತಾಧಿಕಾರಿ ಜಿ. ಸುರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಮೈನಳ್ಳಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಡ್ಡಿ ಶ್ರೀನಿವಾಸ, ಕೊಪ್ಪಳ ತಾಲ್ಲೂಕು ಅಧ್ಯಕ್ಷ ಬಾಲಚಂದ್ರನ್ ಸೇರಿದಂತೆ ಅನೇಕರು ಪಾಲ್ಗೊಳ್ಳುವರು.

Leave a Reply

Your email address will not be published. Required fields are marked *

error: Content is protected !!