
78ನೇ ಭಾರತದ ಸ್ವಾತಂತ್ರ್ಯ ದಿನ ಪ್ರತಿ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಿ : ಅಬ್ದುಲ್ ನಬಿ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 12- 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹರ್ ಘರ್ ತಿರಂಗ ಅಭಿಯಾನ ಕಾರ್ಯಕ್ರಮ ನಗರದ ಪ್ರಧಾನ ಮುಖ್ಯ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಸ್ಟರ್ ಎಂ.ಮಂಜುನಾಥ ಶೆಟ್ಟಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತಿ ಮನೆ ಮೇಲೆ ಹರ್ ಘರ್ ತಿರಂಗ ರಾಷ್ಟ್ರ ಧ್ವಜ ಹಾರಿಸುವ ಪ್ರತಿಯೊಂದು ರಾಷ್ಟ್ರ ಧ್ವಜದ ಬೆಲೆ 25 ರೂಪಾಯಿಗಳಂತೆ ಮಾರಾಟ ಮಾಡಲಾಗುತ್ತಿದೆ ಕಳೆದ ಬಾರಿಯೂ ಅಂಚೆ ಕಚೇರಿಯಲ್ಲಿ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡಲಾಗಿತ್ತು ಈ ಬಾರಿಯೂ ಪ್ರತಿಯೊಬ್ಬರೂ ರಾಷ್ಟ್ರಧ್ವಜ ಖರೀದಿಸಿ ತಮ್ಮ ಮನೆ ಮೇಲೆ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಜನಾಭಿಪ್ರಾಯ ಮುಖಂಡರು ಕರ್ನಾಟಕ ಸರ್ಕಾರ ಲೋಕ ಶಿಕ್ಷಣ ನಿರ್ದೇಶನಾಲಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಸದಸ್ಯರು ಮಿನಿಸ್ಟ್ರಿ ಆಫ್ ಇನ್ಫರ್ಮೇಷನ್ ಕಮ್ಯುನಿಕೇಶನ್ ಅಂಡ್ ಟೆಕ್ನಾಲಜಿ ಎಂ ಡಿ ಜಿ ಎಸ್ ಜಿ ಪಿ ಮೆಂಬರ್ ಆಫ್ ಪೋಸ್ಟ್ ಫೋರಮ್ ಸಾಮಾಜಿಕ ಕಾರ್ಯಕರ್ತ ದೇಶಪ್ರೇಮಿ ಅಬ್ದುಲ್ ನಬಿ ಅವರು ಮುಖ್ಯ ಅತಿಥಿಗಳಾಗಿ ಸರ್ವರನ್ನು ಉದ್ದೇಶಿಸಿ ಅವರು ಮಾತನಾಡುತ್ತಾ ಹರ್ ಘರ್ ತಿರಂಗ ಅಭಿಯಾನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗ ಅಭಿಯಾನ ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ನಡೆಯಲಿದೆ ನಾಗರಿಕರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಉತ್ತೇಜಿಸಲು ಆಜಾಧಿಕಾ ಅಮೃತ್ ಮಹೋತ್ಸವದ ಯೋಜನೆ ಅಡಿ ಹರ್ ಘರ್ ತಿರಂಗ ಅಭಿಯಾನ ಆರಂಭಿಸಲಾಗಿದೆ ಪ್ರತಿಯೊಬ್ಬರ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದರು.
ಅಂಚೆ ಕಚೇರಿಯಲ್ಲಿ ರಾಷ್ಟ್ರಧ್ವಜ ಖರೀದಿಸಬಹುದು ಕಳೆದ ಬಾರಿಯಂತೆ ಈ ಬಾರಿಯೂ ಅಭಿಯಾನ ಮುಂದುವರೆದಿದೆ ಪ್ರತಿಯೊಬ್ಬರಲ್ಲೂ ದೇಶಭಕ್ತಿ ದೇಶಾಭಿಮಾನದ ಅರಿವು ಮೂಡಿಸುವ ಈ ಅಭಿಯಾನವನ್ನು ಎಲ್ಲರೂ ಸಮರ್ಥವಾಗಿ ನಿರ್ವಹಿಸಬೇಕು ಇದರ ಅನ್ವಯ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಸಂಜೆ ಸೂರ್ಯಾಸ್ತದ ವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸಬೇಕು ಎಂದು ಹೇಳಿದರು.
ರಾಷ್ಟ್ರ ಧ್ವಜದ ಗೌರವ ಮತ್ತು ಅದರ ಮೌಲ್ಯಗಳನ್ನು ಗಟ್ಟಿಗೊಳಿಸಿ ದೇಶಭಕ್ತಿಯ ಭಾವವನ್ನು ಮೂಡಿಸಲು ಪ್ರೇರೆಪಿಸುತ್ತದೆ ತಮ್ಮ ನೆರೆ ಹೊರೆಯವರು ಕೂಡ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗವಹಿಸಬೇಕು ಅಭಿಯಾನದ ಉದ್ದೇಶ ಜನರ ಹೃದಯದಲ್ಲಿ ದೇಶಪ್ರೇಮ ತುಂಬುವುದು ಮತ್ತು ದೇಶ ನಿರ್ಮಾಣಕ್ಕೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ಅವಿರತವಾಗಿ ಹೋರಾಟ ಮಾಡಿ ಅವರೊಂದಿಗೆ ಶ್ರಮಿಸಿದ ಎಲ್ಲಾ ಮಹನೀಯರ ಕೊಡುಗೆಯನ್ನು ಸ್ಮರಿಸುವುದಾಗಿದೆ ಭಾರತದ ತ್ರಿವರ್ಣ ಧ್ವಜಕ್ಕೆ ತನ್ನದೇ ಆದ ಗೌರವ ಘನತೆ ಇರುತ್ತದೆ ಸಂವಿಧಾನವನ್ನು ಪಾಲಿಸುವುದು ಮತ್ತು ಅದರ ಆದರ್ಶಗಳು ಹಾಗೂ ಸಂಸ್ಥೆಗಳು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವದು ಭಾರತದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ದೇಶ ಪ್ರೇಮಿ ಅಬ್ದುಲ್ ನಬಿ ಹೇಳಿದರು.
ಅಂಚೆ ಕಚೇರಿಯ ಸಿಬ್ಬಂದಿ ವರ್ಗದವರು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ನೌಶಾದ್ ಅಲಿ ಸಾರ್ವಜನಿಕರು ಹಿರಿಯರು ಕಿರಿಯರು ಇದ್ದರು.