
10 ಕಿ.ಮೀ. ಗುಡ್ಡಗಾಡು ಓಟದಲ್ಲಿ ಮಹಿಳಾ ವಿದ್ಯಾರ್ಥಿನಿಯರ ಸಾಧನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 26- ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನೀಯರು ಶರಣೇಶ್ವರಿ ರಶ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಕಲಬುರ್ಗಿಯಲ್ಲಿ ನಡೆದ 2024-25ನೇ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು 10ಕಿ.ಮೀ. ಗುಡ್ಡಗಾಡು ಓಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ ಹಾಗೂ ಕು.ದೇವಮ್ಮ ಮತ್ತು ಕು.ಪವಿತ್ರ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಗುಡ್ಡಗಾಡು ಓಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಇವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಸದರಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲಿದ್ದಾರೆ.
ಈ ವಿದ್ಯಾರ್ಥಿನಿಯರ ಸಾಧನೆಯನ್ನು ಮೆಚ್ಚಿ ಕಾಲೇಜಿನ ಪ್ರಾಚಾರ್ಯ ಡಾ.ಗಣಪತಿ ಕೆ ಲಮಾಣಿ ಅಭಿನಂದಿಸಿದರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರದೀಪ್ ಕುಮಾರ್ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿ ಅಂತರ್ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿಯೂ ಸಾಧನೆ ಮಾಡಲು ಹಾರೈಸಿದರು ಅದೇ ರೀತಿ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನೀಯರು ಶುಭ ಹಾರೈಸಿದರು.