ವ್ಯಸನ ಮುಕ್ತ ದಿನ : ಡಾಮಹಾಂತ ಶಿವಯೋಗಿಗಳ 95ನೇ ಜನ್ಮದಿನ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 1- ಡಾ ಮಹಾಂತ ಶಿವಯೋಗಿ ಅವರ ಜನ್ಮದಿನ ಆಗಸ್ಟ್ 1 ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆ ಪ್ರೇರಣೆ ಯಾಗಲಿದೆ ಎಂದು ತಾಲೂಕ ಕಚೇರಿಯ ತಹಸಿಲ್ದಾರ್ ರವರ ಶಿರಸ್ತೆದಾರ ರಾಘವೇಂದ್ರ ಅವರು ಅಭಿಪ್ರಾಯಪಟ್ಟರು.
ತಾಲ್ಲೂಕ ಕಚೇರಿ ಸಭಾ ಭವನದಲ್ಲಿ ಕರ್ನಾಟಕ ಸರ್ಕಾರ ತಾಲೂಕ ಆಡಳಿತ ದಿಂದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿದ ಡಾ ಮಹಾಂತ ಶಿವಯೋಗಿಗಳ 95 ನೇ ಜನ್ಮದಿನ ಹಾಗೂ ವ್ಯಸನ ಮುಕ್ತ ದಿನ ಆಚರಣೆಯಲ್ಲಿ ಡಾ ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಹೂ ಮಾಲಾರ್ಪಣೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿ ಸ್ಮರಿಸಿ ಅವರು ಮಾತನಾಡುತ್ತಾ ದುರ್ವೆಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಮನಪರಿವರ್ತಿಸಿ ಜನರಲ್ಲಿನ ದುಶ್ಚಟನೆಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ ಮಹಾಂತ ಶಿವಯೋಗಿಗಳು ಎಂದು ಕರೆ ಕೊಟ್ಟರು.
ರಾಷ್ಟ್ರೀಯ ಸಾಕ್ಷರತಾ ಸದಸ್ಯ ಎ.ಅಬ್ದುಲ್ ನಬಿ ಅವರು ಮಾತನಾಡಿ ನಿರಂತರ ಅನ್ನ ದಾಸೋಹ ವಚನ ಮಾಂಗಲ್ಯ ದೇವದಾಸಿ ವಿಮೋಚನ ಸಂಸ್ಥೆ ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ ನಿರುದ್ಯೋಗಿಗಳಿಗೆ ಮತ್ತು ವಿಧವೇರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ ನಿಸರ್ಗ ಚಿಕಿತ್ಸೆ ಯೋಗ ಕೇಂದ್ರ ಸ್ಥಾಪನೆ ಶಾಖ ಮಠಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು ಮಹಿಳಾ ಸಾಧಕೀರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿ ಕಾರಿಯನ್ನಾಗಿ ಮಾಡಿದ್ದು ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಡಾ ಮಹಾಂತ ಶಿವಾ ಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಗೊಂಡ ಅತ್ಯಂತ ವಿಶಿಷ್ಟವಾದದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಒಗ್ಗೂಡಿಸಿ ಕೈಜೋಡಿಸುವ ವಚನ ಪ್ರಮಾಣ ಹಾಗೂ ಜಯಂತಿ ಹಾಗೂ ಕಾರ್ಯಕ್ರಮ ಆಯೋಜಿಸಿದ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕ ಕಚೇರಿಯ ಗುಡದೇಶ್, ಮಹಾಂತೇಶ, ವಸುಂದರ, ತುಷಾರ್, ಸಮ್ರಿನ್ ಖಲಂದರ್ ,ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ನೌಶಾದ್ ಅಲಿ, ತಾಲೂಕ ಕಚೇರಿಯ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಇದ್ದರು.
