WhatsApp Image 2024-08-17 at 4.14.07 PM

ತೆಕ್ಕಲಕೋಟೆ ಪ.ಪಂ. ಮೀಸಲಾತಿ ಪ್ರಕಟ ಅಧ್ಯಕ್ಷ ಸ್ಥಾನದ ಮೇಲೆ ಎಲ್ಲರ ಕಣ್ಣು

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 17- ತಾಲೂಕು ತೆಕ್ಕಲಕೋಟೆ ಪಟ್ಟಣ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಪ್ರಕಟ ವಾಗಿದೆ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿ ತೊಡಗಿವೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯತ್ 20 ಸದಸ್ಯರನ್ನು ಹೊಂದಿದೆ, 11 ಬಿಜೆಪಿ ಹಾಗೂ 9 ಕಾಂಗ್ರೆಸ್ ಪಕ್ಷದ ಸದಸ್ಯರು ಇದ್ದಾರೆ.

ಈಗಿನ ಮೀಸಲಾತಿ ಅನ್ವಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ನಿಗದಿಪಡಿಸಿ ಸರ್ಕಾರ ಆದೇಶಿಸಿದೆ.

20 ಸದಸ್ಯರಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿಪಡಿಸಲಾದ ಬಿಜೆಪಿಯು 9ನೇ ವಾರ್ಡಿನ ಸದಸ್ಯ ದೊಡ್ಡೆ ರುದ್ರಮ್ಮ ಮಾತ್ರ ಇದ್ದು ಬಿಜೆಪಿ ಉಪಾಧ್ಯಕ್ಷ ಸ್ಥಾನ ಪಡೆಯದಂತಾಗುವುದು.

ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ನಾ ಮುಂದು ತಾ ಮುಂದು ಎಂದು ಪೈಪೋಟಿಗೆ ಇಳಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!