
ವೃತ್ತ ನಾಮಕರಣ : ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 1- ಮಹಾನಗರ ಪಾಲಿಕೆ ವ್ಯಾಪ್ತಿಯ 25 ನೇ ವಾರ್ಡ್ನ ರೇಡಿಯೋ ಪಾರ್ಕ್ನ ವೃತ್ತವನ್ನು ಶ್ರೀ ಕೆ.ಭಾಸ್ಕರ್ ನಾಯ್ಡು ವೃತ್ತ ಎಂದು ನಾಮಕರಣ ಮಾಡಲು ಮಹಾನಗರ ಪಾಲಿಕೆಯ ಸದಸ್ಯರು ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ 30 ದಿನದೊಳಗಾಗಿ ಲಿಖಿತ ರೂಪದಲ್ಲಿ ಪಾಲಿಕೆ ಕಚೇರಿಗೆ ಸಲ್ಲಿಸಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.