
ಕಾರ್ಯಕರ್ತರ ಆತ್ಮ ಸ್ಥೈರ್ಯವೇ ಬಿಜೆಪಿಗೆ ಅನೆಬಲ : ವಿ.ನಾಗರಾಜ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 26- ಚುನಾವಣೆಗಳಲ್ಲಿ ಜಯ ಅಪ ಜಯ ಸಹಜ ಆದರೆ ಕಾರ್ಯಕರ್ತರು ಆತ್ಮಸ್ಥೈರ್ಯದಿಂದ ಮುನ್ನುಗ್ಗಿ ಕೆಲಸ ಮಾಡುವುದರಿಂದ ಪಕ್ಷಕ್ಕೆ ಆನೆ ಬಲ ಬರುತ್ತದೆ ಎಂದು ಬಿಜೆಪಿ ಕೌಲ್ ಬಜಾರ್ ವಿಭಾಗದ ಬಿಜೆಪಿ ಮಂಡಲ ಅಧ್ಯಕ್ಷ ವಿ ನಾಗರಾಜ ರೆಡ್ಡಿ ಕರೆ ನೀಡಿದರು.
ಗುರುವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕಾರಣಿ ಸಮಿತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಪಕ್ಷವು ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವುದಾಗಿ ಪ್ರಧಾನಿ ನರೇಂದ್ರ ಮೋದಿ ಜಿ ಹಲವಾರು ಬಡ ಕುಟುಂಬಗಳಿಗಾಗಿ ಯೋಜನೆಗಳನ್ನು ರೂಪಿಸುತ್ತಿರುವುದಾಗಿ ಹೇಳಿದರು.
ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ ಯೋಜನೆಗಳು ಮತ್ತು ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ತಿಳಿಸಿದರು. ಯಾವುದೇ ಕಾರಣಕ್ಕೂ ಕಾರ್ಯಕರ್ತರು ನಿರುತ್ಸಾಹ ತೋರದೆ, ಪಕ್ಷದ ಚಟುವಟಿಕೆಗಳಲ್ಲಿ ಪಾಲುಗೊಳ್ಳಲು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಜೆಪಿ ಅನಿಲ್ ನಾಯ್ಡು ಮಾತನಾಡುತ್ತಾ ಕಾರ್ಯಕರ್ತರು ಐಕ್ಯತೆಯಿಂದ ಬಿಜೆಪಿ ಸರ್ಕಾರ ಕೆಲಸ ಮಾಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಓಬಳೇಶ್, ಜಿಲ್ಲಾ ಉಪಾಧ್ಯಕ್ಷರು ಬಿಜೆಪಿ ರೈತ ಮೋರ್ಚ ಜಿಲ್ಲಾ ಉಪಾಧ್ಯಕ್ಷರು ಕೆ. ಶಾಮ್ ಸುಂದರ್, ಮಂಡಲ ಉಪಾಧ್ಯಕ್ಷರು ವೆಂಕಟೇಶ್ ಮತ್ತು ಶಂಕರಪ್ಪ, ನೂರ್ ಬಾಷಾ,ಆರ್ ಶಿವಕುಮಾರ್, ಮತ್ತು ಬಿಜೆಪಿ ಮಹಿಳಾ ವಿಭಾಗದ ಕಾರ್ಯಕರ್ತರು ಪಾಲ್ಗೊಂಡಿದ್ದರು.