
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 3- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಂದ ೨೦೨೪-೨೫ನೇ ಸಾಲಿಗೆ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿದ್ದು, ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ಎಸ್.ಸಿ ಮತ್ತು ಎಸ್.ಟಿ ರೂ.೨.೫೦ ಲಕ್ಷ, ಪ್ರವರ್ಗ ೨ಎ, ೨ಬಿ, ೩ಎ,೩ ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೧.೦೦ ಲಕ್ಷಕ್ಕೆ ಮೀರಿರಬಾರದು.
ಹೊಸ ಅರ್ಜಿಗಳನ್ನು ನವಂಬರ್ ೫ರೊಳಗಾಗಿ ತಾಲೂಕ ಕಲ್ಯಾಣಾಧಿಕಾರಿಗಳು ಪರಿಶೀಲನೆ ಮಾಡುವರು.
ತಾಲೂಕ ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆಪಟ್ಟಿ ನ.೮ಕ್ಕೆ ಪ್ರಕಟಣೆ, ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ನ.೧೧ ಅಂತಿಮ ದಿನವಾಗಿರುತ್ತದೆ.
ವಿದ್ಯಾರ್ಥಿಗಳು ವೆಬ್‌ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bಛಿತಿಜheಟಠಿಟiಟಿe@gmಚಿiಟ.ಛಿom ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಹಾಯವಾಣಿ ಸಂಖ್ಯೆ; ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ಗೆ ಕರೆ ಮಾಡಬಹುದು ಎಂದು ವಿಜಯನಗರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.